ದಸರಾ ಕ್ರೀಡಾಕೂಟ ಉದ್ಘಾಟನೆ

dasara sports
Published on

ಮಡಿಕೇರಿ:

ಮಡಿಕೇರಿ ತಾಲೂಕು ಮಟ್ಟದ ದಸರಾ ಕ್ರೀಡಾಕೂಟವನ್ನು ಸೋಮವಾರ ಉದ್ಘಾಟಿಸಲಾಯಿತು. ಯುವ ಸಬಲೀಕರಣ ಮತ್ತು ಕ್ರೀಡ ಇಲಾಖೆ ಸಹಾಯಕ ನಿರ್ದೇಶಕಿ ವಿ.ಟಿ ವಿಸ್ಮಯಿ ಚಕ್ರವರ್ತಿ ಅಧ್ಯಕ್ಷತೆಯಲ್ಲಿ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಕಾರ್ಯಕ್ರಮ ನಡೆಯಿತು.

ಅಥ್ಲೆಟಿಕ್ಸ್, ವಾಲಿಬಾಲ್, ಕಬ್ಬಡಿ, ಥ್ರೋಬಾಲ್, ಖೋ-ಖೋ ಮತ್ತು ಯೋಗ ಸ್ಪರ್ಧೆಗಳು ನಡೆದವು. ಸುಮಾರು 500 ಕ್ಕೂ ಹೆಚ್ಚು ಮಹಿಳಾ ಮತ್ತು ಪುರುಷ ಕ್ರೀಡಾ ಪಟುಗಳು ಭಾಗವಹಿಸಿದ್ದರು.

ವೈಯಕ್ತಿಕ ವಿಭಾಗದಲ್ಲಿ ಪ್ರಥಮ ಮತ್ತು ದ್ವಿತೀಯ ಸ್ಥಾನಗಳಿಸಿದ ಕ್ರೀಡಾಪಟುಗಳು, ಗುಂಪು ಸ್ಪರ್ಧೆಯಲ್ಲಿ ಜಯಗಳಿಸಿ, ಪ್ರಥಮ ಸ್ಥಾನ ಗಳಿಸಿದ ತಂಡಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದವು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net