

ಮಂಡ್ಯ: ಜಿಲ್ಲೆಯ ಎಲ್ಲ ತಾಲೂಕಿನಲ್ಲಿ ಸೆ.21ರಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ತಾಲೂಕು ಮಟ್ಟದ ದಸರಾ ಕ್ರೀಡಾಕೂಟ ಆಯೋಜಿಸಲಾಗಿದೆ.
100 ಮೀ, 200 ಮೀ, 400 ಮೀ, 800 ಮೀ, 1,500 ಮೀ, 3 ಸಾವಿರ ಮೀ(ಮಹಿಳೆಯರಿಗೆ), 5 ಸಾವಿರ ಮೀ ಮತ್ತು 10 ಸಾವಿರ ಮೀ(ಪುರುಷರಿಗೆ), ಉದ್ದ ಜಿಗಿತ, ಎತ್ತರ ಜಿಗಿತ, ಗುಂಡು ಎಸೆತ, ಟ್ರಿಪಲ್ ಜಂಪ್, ಜಾವಲಿನ್ ಥ್ರೋ, ಡಿಸ್ಕಸ್ ಥ್ರೋ, 110 ಮೀ ಹರ್ಡಲ್ಸ್, 4*100 ಮೀ ರಿಲೇ 4*400ಮೀ ರಿಲೇ ಹಾಗೂ ವಾಲಿಬಾಲ್, ಖೋ-ಖೋ, ಕಬಡ್ಡಿ, ಥ್ರೋಬಾಲ್, ಬಾಲ್ ಬ್ಯಾಡ್ಮಿಂಟನ್ ನಡೆಯಲಿದೆ. ಷಟಲ್ ಬ್ಯಾಡ್ಮಿಂಟನ್ ಕ್ರೀಡೆಯನ್ನು ಮಂಡ್ಯ, ಮದ್ದೂರು ಮತ್ತು ಕೆ.ಆರ್.ಪೇಟೆ ಮಾತ್ರ ಏರ್ಪಡಿಸಲಾಗುವುದು.
ಆಯಾಯ ತಾಲೂಕಿನ ಕ್ರೀಡಾಂಗಣದಲ್ಲಿ ಸ್ಫರ್ಧೆ ನಡೆಯಲಿದೆ. ವೈಯಕ್ತಿಕ ಕ್ರೀಡೆಯಲ್ಲಿ ಪ್ರಥಮ ಮತ್ತು ದ್ವಿತೀಯ ಸ್ಥಾನ ಪಡೆದವರು, ಗುಂಪು ಕ್ರೀಡೆಯಲ್ಲಿ ಪ್ರಥಮ/ಆಯ್ಕೆ ತಂಡ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಭಾಗವಹಿಸಬಹುದು. ಆಯಾ ತಾಲೂಕಿನ ಕ್ರೀಡಾಪಟುಗಳು ಮಾತ್ರ ತಾಲೂಕುಮಟ್ಟದಲ್ಲಿ ಭಾಗವಹಿಸಲು ಅರ್ಹತೆ ಹೊಂದಿರುತ್ತಾರೆ. ಆದ್ದರಿಂದ ಆಧಾರ್ ಕಾರ್ಡ್ ತರುವುದು ಕಡ್ಡಾಯ. ಸ್ಪರ್ಧೆ ಏರ್ಪಡಿಸಲು ಕನಿಷ್ಟ 4 ತಂಡ ಇರಬೇಕು. ಇಲ್ಲದಿದ್ದಲ್ಲಿ ಆಯ್ಕೆ ನಡೆಸಿ ಮುಂದಿನ ಹಂತಕ್ಕೆ ಕಳುಹಿಸಲಾಗುವುದು. ಒಬ್ಬರಿಗೆ ಎರಡು ವೈಯಕ್ತಿಕ ಹಾಗೂ ಒಂದು ಗುಂಪು ಸ್ಪರ್ಧೆಯಲ್ಲಿ ಮಾತ್ರ ಭಾಗವಹಿಸಲು ಅವಕಾಶವಿರಲಿದೆ.
ಜಿಲ್ಲಾಮಟ್ಟಕ್ಕೆ ಆಯ್ಕೆಯಾಗುವ ಕ್ರೀಡಾಪಟುಗಳು ಕಡ್ಡಾಯವಾಗಿ ಪಾಸ್‌ಪೋರ್ಟ್ ಅಳತೆಯ 2 ಭಾವಚಿತ್ರ, ಆಧಾರ್ ಕಾರ್ಡ್ ಮತ್ತು ರಾಷ್ಟ್ರೀಕೃತ ಬ್ಯಾಂಕಿನ ಪಾಸ್‌ಬುಕ್ ನಕಲು ಪ್ರತಿ(ಬ್ಯಾಂಕಿನ ಐಎಫ್‌ಎಸ್‌ಸಿ ಕೋಡ್ ಸಂಖ್ಯೆ ನಮೂದಿಸುವುದು) ನೀಡಬೇಕು. ತಾಲೂಕು ಮಟ್ಟದ ಕ್ರೀಡಾಕೂಟದ ನೋಂದಣಿಗೆ ಕೆ.ಆರ್.ಪೇಟೆ-ಜೆ.ಪ್ರಭುಕುಮಾರ್(7026096535), ನಾಗಮಂಗಲ-ಎಚ್.ಎಂ.ಸುರೇಶ್(9845164974), ಮದ್ದೂರು-ಮಹದೇವು(9964029537), ಶ್ರೀರಂಗಪಟ್ಟಣ-ಸಿದ್ದರಾಜು(9480721054), ಮಳವಳ್ಳಿ-ನಾಗರತ್ನಮ್ಮ(9964979104), ಪಾಂಡವಪುರ-ಮಹದೇಶ್(9164870341), ಮಂಡ್ಯ-ವಿಜಯಕುಮಾರ್(86608187820) ಮತ್ತು ಹೊವಯ್ಯ(9449627810) ಅವರನ್ನು ಸಂಪರ್ಕಿಸುವಂತೆ ಇಲಾಖೆ ಸಹಾಯಕ ನಿರ್ದೇಶಕ ಓಂ ಪ್ರಕಾಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.