ಕ್ರೀಡೆಯಿಂದ ದೈಹಿಕ, ಮಾನಸಿಕ ಸದೃಢತೆ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ ಉದ್ಘಾಟಿಸಿ ಜಿಪಂ ಸಿಇಒ ಡಾ.ಕುಮಾರ್

mng--10 Sep Dasara sports
Published on

ಮಂಗಳೂರು: ದೈಹಿಕ ಹಾಗೂ ಮಾನಸಿಕ ಸದೃಢತೆಗೆ ಕ್ರೀಡೆ ಅವಶ್ಯ. ವಿದ್ಯಾರ್ಥಿಗಳು ಸಿಕ್ಕಿದ ಅವಕಾಶಗಳನ್ನು ಬಳಸಿಕೊಂಡು ಪ್ರತಿಭೆಯನ್ನು ಹೊರಗೆಡಹಿ ಸಾಧನೆ ಮಾಡಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಕುಮಾರ ಹೇಳಿದರು.


ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ ದ.ಕ. ಜಿಲ್ಲೆ, ದ.ಕ. ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘ, ದಕ್ಷಿಣ ಕನ್ನಡ ಜಿಲ್ಲಾ ಯುವಜನ ಒಕ್ಕೂಟ ಹಾಗೂ ಮಂಗಳೂರು ಮಹಾನಗರ ಪಾಲಿಕೆ ಸಂಯುಕ್ತಾಶ್ರಯದಲ್ಲಿ ನಗರದ ಮಂಗಳಾ ಕ್ರೀಡಾಂಗಣದಲ್ಲಿ ಶನಿವಾರ ನಡೆದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ 2022-23 ಉದ್ಘಾಟಿಸಿ ಅವರು ಮಾತನಾಡಿದರು.


ಕ್ರೀಡೆಯಲ್ಲಿ ಸೋಲು-ಗೆಲುವು ನಿಶ್ಚಿತ. ಸೋತಾಗ ಕುಗ್ಗದೆ, ಗೆದ್ದರೆ ಹಿಗ್ಗದೆ ಲಿತಾಂಶವನ್ನು ಸವಾಲಾಗಿ ಸ್ವೀಕರಿಸಬೇಕು. ವಿದ್ಯಾರ್ಥಿಗಳು ಶಿಕ್ಷಣ ಜೊತೆಗೆ ಸಾಂಸ್ಕೃತಿಕ, ಕ್ರೀಡಾ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು. ಜೀವನದಲ್ಲಿ ಜವಾಬ್ದಾರಿ ಮತ್ತು ಸವಾಲುಗಳನ್ನು ಸ್ವೀಕರಿಸಬೇಕು ಎಂದರು.


ಮನಪಾ ಸದಸ್ಯೆ ಸಂಧ್ಯಾ ಆಚಾರ್ಯ ಮಾತನಾಡಿ, ನಮ್ಮ ಜೀವನದ ಉತ್ಸಾಹವನ್ನು ಕ್ರೀಡೆ ಹೆಚ್ಚಿಸುತ್ತದೆ. ಪ್ರತಿಯೊಬ್ಬರೂ ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸಿ ಎಂದು ಶುಭ ಹಾರೈಸಿದರು.
ನೆಹರೂ ಯುವ ಕೇಂದ್ರ ಜಿಲ್ಲಾ ಯುವ ಅಧಿಕಾರಿ ರಘುವೀರ ಸೂಟರ್‌ಪೇಟೆ, ಹ್ಯಾಂಡ್‌ಬಾಲ್ ಎಸೋಸಿಯೇಶನ್ ಅಧ್ಯಕ್ಷ ಧನರಾಜ್, ಜಿಲ್ಲಾ ಕ್ರೀಡಾಂಗಣ ಸಮಿತಿ ಸದಸ್ಯೆ ಸಂಧ್ಯಾ ವೆಂಕಟೇಶ್, ನಿವೃತ್ತ ವಾಲಿಬಾಲ್ ತರಬೇತುದಾರ ನಾರಾಯಣ ಆಳ್ವ ಮತ್ತಿತರರು ಇದ್ದರು.


ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ರವಿ ವೈ. ನಾಯಕ್ ಪ್ರಸ್ತಾವಿಕ ಮಾತನಾಡಿ, ಸ್ವಾಗತಿಸಿದರು. ಇಲಾಖೆಯ ಅಧೀಕ್ಷಕ ಮಂಜು ಎಲ್. ವಂದಿಸಿದರು. ದೈಹಿಕ ಶಿಕ್ಷಣ ಶಿಕ್ಷಕ ಸುರೇಶ್ ಶೆಟ್ಟಿ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net