ಕ್ರೀಡೆಯಿಂದ ಶಿಸ್ತು, ಸಂಯಮ ವೃದ್ಧಿ ದಸರಾ ಕ್ರೀಡಾಕೂಟ ಉದ್ಘಾಟಿಸಿ ಉಪ ಮೇಯರ್ ಸುಮಂಗಳಾ ರಾವ್

mangala
Published on

ಮಂಗಳೂರು: ಕ್ರೀಡೆಯಿಂದ ಶಿಸ್ತು, ಸಂಯಮ, ಆರೋಗ್ಯ ವೃದ್ಧಿಸುತ್ತದೆ. ಪ್ರತಿಯೊಬ್ಬರೂ ಕ್ರೀಡಾ ಕ್ಷೇತ್ರದಲ್ಲಿ ಪಾಲ್ಗೊಳ್ಳಬೇಕು. ಕ್ರೀಡೆಗಳಲ್ಲಿ ಸೋಲು-ಗೆಲುವು ಸಹಜ. ಗೆದ್ದಾಗ ಹಿಗ್ಗದೆ, ಸೋತಾಗ ಕುಗ್ಗದೆ, ಪ್ರತಿಯೊಬ್ಬರೂ ಕ್ರೀಡಾಸ್ಪೂರ್ತಿ ಮೆರೆಯಬೇಕು ಎಂದು ಉಪಮೇಯರ್ ಸುಮಂಗಳಾ ರಾವ್ ಹೇಳಿದರು.


ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ದ.ಕ. ಜಿಲ್ಲೆ, ಮಂಗಳೂರು ತಾಲೂಕು ಪಂಚಾಯಿತಿ, ಮಂಗಳೂರು ಮಹಾನಗರ ಪಾಲಿಕೆಯ ಸಂಯುಕ್ತಾಶ್ರಯದಲ್ಲಿ ಶನಿವಾರ ಮಂಗಳಾ ಕ್ರೀಡಾಂಗಣದಲ್ಲಿ ಮಂಗಳೂರು ತಾಲೂಕು ಮಟ್ಟದ ದಸರಾ ಕ್ರೀಡಾಕೂಟ 2022-23 ಉದ್ಘಾಟಿಸಿ, ಅವರು ಮಾತನಾಡಿದರು.


ಮನಪಾ ಸದಸ್ಯೆ ಸಂಧ್ಯಾ ಎಂ.ಆಚಾರ್ಯ, ಜಿಲ್ಲಾ ಕ್ರೀಡಾಂಗಣ ಸಮಿತಿ ಸದಸ್ಯರಾದ ಪುರುಷೋತ್ತಮ ಪೂಜಾರಿ, ಸಂಧ್ಯಾ ವೆಂಕಟೇಶ್, ದ.ಕ. ುಟ್‌ಬಾಲ್ ಎಸೋಸಿಯೇಶನ್ ಅಧ್ಯಕ್ಷ ಅಸ್ಲಾಂ ಉಪಸ್ಥಿತರಿದ್ದರು.
ರಾಷ್ಟ್ರೀಯ ಮಟ್ಟದ ಆ್ಯತ್ಲೇಟ್ ಪ್ರಾಂಜಲಿ ಕ್ರೀಡಾ ಪ್ರತಿಜ್ಞೆ ಬೋಧಿಸಿದರು. ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ರವಿ ವೈ. ನಾಯಕ್ ಸ್ವಾಗತಿಸಿ, ಪ್ರಾಸ್ತಾವಿಕ ಮಾತನಾಡಿದರು. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಅಧೀಕ್ಷಕ ಮಂಜು ಎಲ್. ವಂದಿಸಿ, ಸುರೇಶ್ ಶೆಟ್ಟಿ ನಿರ್ವಹಿಸಿದರು. ಕ್ರೀಡಾಕೂಟದಲ್ಲಿ ಸುಮಾರು 750ಕ್ಕೂ ಹೆಚ್ಚಿನ ಮಂದಿ ಭಾಗವಹಿಸಿದ್ದರು.


ವಿವಿಧ ಕ್ರೀಡೆಗಳ ಆಯೋಜನೆ
18 ವರ್ಷ ಮೇಲ್ಪಟ್ಟ ಪುರುಷರು ಮತ್ತು ಮಹಿಳೆಯರು ಆ್ಯತ್ಲೆಟಿಕ್‌ನ 100 ಮೀ., 200 ಮೀ., 400 ಮೀ., 800 ಮೀ., 1500 ಮೀ., 5000 ಮೀ. ಓಟ, ಉದ್ದ ಜಿಗಿತ, ಎತ್ತರ ಜಿಗಿತ, ಗುಂಡು ಎಸೆತ, ಟ್ರಿಪಲ್ ಜಂಪ್, ಜಾವೆಲಿನ್ ಥ್ರೋ, ಡಿಸ್ಕಸ್ ತ್ರೋ, ಹರ್ಡಲ್ಸ್, 4100 ಮೀ. ರಿಲೇ, 4400 ಮೀ. ರಿಲೇ, ವಾಲಿಬಾಲ್, ುಟ್ಬಾಲ್, ಕೋಕೋ, ಕಬಡ್ಡಿ ಹಾಗೂ ಥ್ರೋಬಾಲ್ ಕ್ರೀಡೆಗಳಲ್ಲಿ ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net