ದಾಸವಾಣಿ ಇಂದು

New Dasavani
Published on

ಹುಬ್ಬಳ್ಳಿ: ಇಲ್ಲಿನ ಸಂತೋಷ ನಗರದ ಶಕ್ತಿ ಕಾಲನಿಯಲ್ಲಿರುವ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಆ. 8ರಂದು ಸಂಜೆ 6 ರಿಂದ 7.30ರವರೆಗೆ ಆದಿತಿ ಅಚ್ಯುತ ಕುಲಕರ್ಣಿ ಅವರಿಂದ ದಾಸವಾಣಿ ಹಾಗೂ ಭಕ್ತಿ ಸಂಗೀತ ಕಾರ್ಯಕ್ರಮ ಆಯೋಜಿಸಲಾಗಿದೆ.

ತಬಲಾ ಸಾಥಿದಾರರಾಗಿ ಮನುಕುಮಾರ ಹಿರೇಮಠ, ರಾಘವೇಂದ್ರ ನಾಕೋಡ್ ಮತ್ತು ಹಾಮೋನಿಯಂ ಸಾಥಿದಾರರಾಗಿ ಕುಶಾಲ್ ಗಲಗಲಿ ಭಾಗವಹಿಸುವರು ಎಂದು ರಾಘವೇಂದ್ರ ಸ್ವಾಮಿ ಮಠದ ಅಧ್ಯಕ್ಷ ಗೋವಿಂದಾಚಾರ್ಯ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net