ಫೆ.5ರಂದು ಬೆಂಗಳೂರಲ್ಲಿ ರಾಗಿಮುದ್ದೆ ಉಣ್ಣುವ ಸ್ಪರ್ಧೆ: ದಶಮುಖ ಸಾಮಾಜಿಕ ಸೇವಾ ಟ್ರಸ್ಟ್ ಅಧ್ಯಕ್ಷ ಬೊಮ್ಮೇಗೌಡ ಮಾಹಿತಿ

Dashamukha Social Service Trust press conference Mandya
Published on

ಮಂಡ್ಯ: ದಶಮುಖ ಸಾಮಾಜಿಕ ಸೇವಾ ಟ್ರಸ್ಟ್ ವತಿಯಿಂದ ಆರೋಗ್ಯಕರ ಜೀವನಕ್ಕೆ ರಾಗಿಯ ಮಹತ್ವ ಕುರಿತು ಉಪನ್ಯಾಸ ಮತ್ತು ರಾಜ್ಯಮಟ್ಟದ ನಾಟಿಕೋಳಿ ಸಾಂಬಾರ್‌ನಲ್ಲಿ ರಾಗಿಮುದ್ದೆ ಉಣ್ಣುವ ಸ್ಪರ್ಧೆಯನ್ನು ಫೆ.5ರಂದು ಬೆಂಗಳೂರಿನಲ್ಲಿ ಆಯೋಜಿಸಲಾಗಿದೆ ಎಂದು ಟ್ರಸ್ಟ್ ಅಧ್ಯಕ್ಷ ಎಚ್.ಕೆ.ಬೊಮ್ಮೇಗೌಡ ತಿಳಿಸಿದರು.

ಟ್ರಸ್ಟ್‌ನ ಎಂಟನೇ ವಾರ್ಷಿಕೋತ್ಸವದ ಅಂಗವಾಗಿ ಬೆಳಗ್ಗೆ 10.30ಕ್ಕೆ ಬೆಂಗಳೂರಿನ ಬಿಳೇಕಹಳ್ಳಿ, ವಿಜಯಾಬ್ಯಾಂಕ್ ಲೇಔಟ್‌ನ ಮುಲ್ಕಿ ಸುಂದರಾಂ ಶೆಟ್ಟಿ ಮೆಮೋರಿಯಲ್ ಹಾಲ್‌ನಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ. ವಿಶ್ವ ಒಕ್ಕಲಿಗ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಡಾ.ನಿಶ್ಚಲಾನಂದನಾಥ ಸ್ವಾಮೀಜಿ ಉದ್ಘಾಟಿಸಲಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ, ಶಾಸಕ ಸತೀಶ್‌ರೆಡ್ಡಿ ಸೇರಿದಂತೆ ಹಲವು ಗಣ್ಯರು ಭಾಗವಹಿಸುವರು ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಮಧ್ಯಾಹ್ನ 1.30ಕ್ಕೆ ರಾಗಿ ಮುದ್ದೆ ಉಣ್ಣುವ ಸ್ಪರ್ಧೆ ನಡೆಯಲಿದೆ. ಪ್ರವೇಶ ಶುಲ್ಕ 1 ಸಾವಿರ ರೂ ನಿಗದಿಪಡಿಸಲಾಗಿದೆ. ವಿಜೇತರಿಗೆ ಪ್ರಥಮ ಬಹುಮಾನ 25 ಸಾವಿರ ರೂ, ದ್ವಿತೀಯ ಬಹುಮಾನ 15 ಸಾವಿರ ರೂ ಹಾಗೂ ತೃತೀಯ ಬಹುಮಾನ 7,500 ರೂ ನೀಡಲಾಗುವುದು ಎಂದು ಮಾಹಿತಿ ನೀಡಿದರು.

ಟ್ರಸ್ಟ್‌ನ ಉಪಾಧ್ಯಕ್ಷ ಎಚ್.ಎ.ರವಿಶಂಕರ್, ಮಂಗಲ ಲಂಕೇಶ್, ಶಿವಪ್ಪ, ವೈ.ಡಿ.ರವಿಶಂಕರ್, ಜಿ.ಬಿ.ರಮೇಶ್‌ಗೌಡ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net