ಡಿಸಿ ಕಚೇರಿಯಲ್ಲಿ ದಾಸಿಮಯ್ಯ ಜಯಂತಿ

jayanti
Published on

ವಿಜಯವಾಣಿ ಸುದ್ದಿಜಾಲ ಬೆಂಗಳೂರು ಗ್ರಾಮಾಂತರ

ವೃತ್ತಿಯಲ್ಲಿ ನೇಯ್ಗೆಯವರಾದ ದೇವರ ದಾಸಿಮಯ್ಯ ಅವರು ಶಿವನಿಗೆ ಬಟ್ಟೆಯನ್ನು ಕೊಟ್ಟು ಅಪೂರ್ವಭಕ್ತಿ ಮೆರೆದರಂತೆ ಎಂಬುದು ಐತಿಹ್ಯ ಪುರಾಣಗಳಲ್ಲಿ ಉಲ್ಲೇಖಗಳು ಸಿಗುತ್ತವೆ. ಅವರು ಶಿವನ ಅಪಾರ ಭಕ್ತರಾಗಿದ್ದರು ಎಂದು ಅಪರ ಜಿಲ್ಲಾಧಿಕಾರಿ ಸೈಯಿದಾ ಆಯಿಷಾ ಸ್ಮರಿಸಿದರು.

ದೇವನಹಳ್ಳಿಯ ಜಿಲ್ಲಾಡಳಿತಭವನದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾಡಳಿತ, ಜಿಪಂ ವತಿಯಿಂದ ಹಮ್ಮಿಕೊಂಡಿದ್ದ ದೇವರ ದಾಸಿಮಯ್ಯ ಜಯಂತಿಯಲ್ಲಿ ದಾಸಿಮಯ್ಯ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಮಾತನಾಡಿದರು. ರಾಮನಾಥ ಇವರ ಅಂಕಿತನಾಮವಾಗಿದೆ. ಶಿವ ಜಗತ್ತನ್ನೇ ವ್ಯಾಪಿಸಿಕೊಂಡಂತೆ, ಜಗತ್ತೇ ಶಿವನ ರೂಪ ಎಂಬ ನಿಲುವಿನೊಂದಿಗೆ, ಇಳೆ ನಿಮ್ಮ ದಾನ, ಬೆಳೆ ನಿಮ್ಮ ದಾನ, ಸುಳಿದು ಸೂಸುವ ಗಾಳಿ ನಿಮ್ಮ ದಾನವಯ್ಯ ಎಂದೆನ್ನುವ ದಾಸಿಮಯ್ಯ ಅವರಲ್ಲಿ ಈ ಲೋಕವನ್ನು ನೋಡುವ ಕ್ರಮ ಹೊಸತನದಿಂದ ಕೂಡಿದೆ. ಅವರ ವಚನಗಳು ಇಂದಿಗೂ ಪ್ರಸ್ತುತವಾಗಿದೆ ಎಂದು ಗುಣಗಾನ ಮಾಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net