86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ತಾತ್ಕಾಲಿಕ ದಿನಾಂಕ ನಿಗದಿ..

Kasapa
Published on

ಹಾವೇರಿ: ಕನ್ನಡ ಸಾಹಿತ್ಯ ಪರಿಷತ್ ಹಾವೇರಿಯಲ್ಲಿ ನಡೆಸಲಿರುವ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ತಾತ್ಕಾಲಿಕ ದಿನಾಂಕವನ್ನು ನಿಗದಿ ಆಗಿದೆ.

ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮಹೇಶ ಜೋಶಿ ಅವರ ನೇತೃತ್ವದಲ್ಲಿ ಇಂದು ಹಾವೇರಿ ಜಿಲ್ಲಾಧಿಕಾರಿಯವರ ಸಭಾಂಗಣದಲ್ಲಿ ನಡೆದ ಸಾಹಿತ್ಯ ಸಮ್ಮೇಳನದ ಪೂರ್ವಭಾವಿ ಸಭೆಯಲ್ಲಿ ಈ ದಿನಾಂಕವನ್ನು ನಿಗದಿ ಮಾಡಲಾಗಿದೆ.

ಈ ಬಾರಿ ಹಾವೇರಿ ಜಿಲ್ಲೆಯಲ್ಲಿ ನಡೆಯಲಿರುವ ಸಾಹಿತ್ಯ ಸಮ್ಮೇಳನ ವಿಶಿಷ್ಟ ರೀತಿಯಲ್ಲಿ ನಡೆಯಬೇಕು. ಅತ್ಯಾಧುನಿಕ ವ್ಯವಸ್ಥೆ, ವೇದಿಕೆ, ಎಲ್ಲವನ್ನೂ ಅಚ್ಚುಕಟ್ಟಾಗಿ ಮಾಡಬೇಕು. ಈ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಜೊತೆ ಚರ್ಚಿಸಿ ತೀರ್ಮಾನ ಮಾಡಲು ಇಂದಿನ ಸಭೆಯಲ್ಲಿ ನಿರ್ಧರಿಸಲಾಯಿತು ಎಂದು ಜೋಶಿ ತಿಳಿಸಿದರು.

ಮೇ 20, 21, 22ರಂದು ಕನ್ನಡ ಸಾಹಿತ್ಯ ಸಮ್ಮೇಳನ ನಡೆಸಲು ತಾತ್ಕಾಲಿಕವಾಗಿ ದಿನಾಂಕ ನಿಗದಿ ಮಾಡಲಾಗಿದೆ. ಸದ್ಯದಲ್ಲೇ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ್ ಹೆಬ್ಬಾರ್ ಜೊತೆ ಮತ್ತೊಂದು ಸಲ ಸಭೆ ನಡೆಸಲಾಗುವುದು. ಆ ನಂತರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜೊತೆ ಚರ್ಚೆ ನಡೆಸಿ ಅಧಿಕೃತವಾಗಿ ದಿನಾಂಕ ನಿಗದಿ ಪಡಿಸಲಾಗುವುದು ಎಂದು ಜೋಶಿ ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net