ದತ್ತಪೀಠ ರಸ್ತೆ ಕೆಲಕಾಲ ಬಂದ್

16 ckm 11
ಚಿಕ್ಕಮಗಳೂರು ತಾಲೂಕಿನ ಮುಳ್ಳಯ್ಯನಗಿರಿ ಹಾಗೂ ದತ್ತಪೀಠಕ್ಕೆ ಸಂಪರ್ಕಿಸುವ ರಸ್ತೆಗೆ ಅಡ್ಡಲಾಗಿ ಬಿದ್ದಿರುವ ಬೃಹದಾಕಾರದ ಮರ.
Published on

ಚಿಕ್ಕಮಗಳೂರು: ಚಿಕ್ಕಮಗಳೂರು ತಾಲೂಕಿನಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಹಿರೇಮಗಳೂರು ಸಮೀಪದ ಬಿಳೇಕಲ್ಲು ಗ್ರಾಮದಲ್ಲಿ ಮನೆ ಹಾಗೂ ಕೊಟ್ಟಿಗೆ ಕುಸಿದಿದ್ದರೆ, ಮುಳ್ಳಯ್ಯನಗಿರಿ ದತ್ತಪೀಠಕ್ಕೆ ಹೋಗುವ ರಸ್ತೆಗೆ ಅಡ್ಡಲಾಗಿ ಬೃಹದಾಕಾರದ ಮರ ಬಿದ್ದಿದ್ದರಿಂದಾಗಿ ಗಿರಿ ಪ್ರದೇಶಕ್ಕೆ ಕೆಲಕಾಲ ಸಂಚಾರ ಬಂದ್ ಆಗಿತ್ತು. ಬಳಿಕ ಮರವನ್ನು ತೆರವುಗೊಳಿಸಿ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ.

ಚಂದ್ರದ್ರೋಣ ಪರ್ವತದ ವಾಟೆ ಖಾನ್ ಗ್ರಾಮದ ಬಳಿ ಗಿರಿ ಪ್ರದೇಶಕ್ಕೆ ತೆರಳುವ ರಸ್ತೆಗೆ ಅಡ್ಡಲಾಗಿ ಬೃಹದಾಕಾರದ ಮರ ಬಿದ್ದಿತ್ತು. ಇದರಿಂದಾಗಿ ಕೆಲ ಗಂಟೆಗಳ ಕಾಲ ವಾಹನ ಸಂಚಾರ ಸ್ಥಗಿತಗೊಂಡಿತ್ತು. ರತ್ತೆಗೆ ಅಡ್ಡಲಾಗಿ ಮರ ಬಿದ್ದಿದ್ದರಿಂದಾಗಿ ನೂರಾರು ಪ್ರವಾಸಿ ವಾಹನಗಳು ರಸ್ತೆಯುವುದಕ್ಕೂ ಸಾಲುಗಟ್ಟಿ ನಿಂತಿದ್ದವು. ಪ್ರವಾಸಿಗರು ಸುರಿಯುವ ಮಳೆಯಲ್ಲಿಯೇ ಕಾಯುವ ಸ್ಥಿತಿ ನಿರ್ಮಾಣವಾಗಿತ್ತು.
ಸೋಮವಾರ ಸುರಿದ ಧಾರಾಕಾರ ಮಳೆಗೆ ಹಿರೇಮಗಳೂರು ಸಮೀಪದ ಬಿಳೇಕಲ್ಲು ಗ್ರಾಮದ ಮಂಜಶೆಟ್ಟಿ ಎಂಬುವರ ವಾಸದ ಮನೆ ಹಾಗೂ ದನದ ಕೊಟ್ಟಿಗೆ ಕುಸಿದು ಬಿದ್ದಿವೆ. ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಆದರೆ ಗೃಹಬಳಕೆ ವಸ್ತುಗಳು ಹಾನಿಯಾಗಿವೆ. ತಳಕ್ಕೆ ಕಂದಾಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net