

ಹಾವೇರಿ: ಮಗಳ ಮದುವೆ ಮಾಡಿಸಿದಾಗ ಬಾಲ್ಯವಿವಾಹ ಪ್ರಕರಣ ದಾಖಲಾಗಿದ್ದರಿಂದ ಮನನೊಂದು ತಂದೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಲ್ಲಿಯ ನಾಗೇಂದ್ರನಮಟ್ಟಿಯಲ್ಲಿ ಭಾನುವಾರ ನಡೆದಿದೆ.
ರವಿ ದಶರತ ಗೋಸಾವಿ (42) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ.
ಈತನ ಮೇಲೆ ಮಗಳ ಮದುವೆ ಮಾಡಿಸಿದಾಗ ಬಾಲ್ಯವಿವಾಹ ಪ್ರಕರಣ ದಾಖಲಾಗಿತ್ತು. ಇದರಿಂದ ವಿಪರೀತ ಮದ್ಯ ಸೇವನೆ ಮಾಡುತ್ತ ಮಾನಸಿಕ ಮಾಡಿಕೊಂಡಿದ್ದ. ಇದರಿಂದ ಮನೆಯಲ್ಲಿಯೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಈ ಕುರಿತು ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.