ಅತ್ತೆ, ಮಾವನ ಮೇಲಿದ್ದ ಸಿಟ್ಟಿಗೆ ಅಡಿಕೆ ತೋಟ ಸರ್ವನಾಶ ಮಾಡಿದ ಸೊಸೆ ಪೊಲೀಸರ ವಶಕ್ಕೆ

davanagere story
Published on

ದಾವಣಗೆರೆ: ಅತ್ತೆ, ಮಾವನ ಮೇಲಿನ ಸಿಟ್ಟಿನಿಂದ ಸೊಸೆಯೊಬ್ಬಳು ಅಡಿಕೆ ಮರಗಳನ್ನೇ ಕಡಿದು ಹಾಕಿದ ಘಟನೆ ದಾವಣಗೆರೆ ತಾಲೂಕಿನ ಅವರಗೊಳ್ಳ ಗ್ರಾಮದಲ್ಲಿ ಈ ಘಟನೆ ನಡೆದಿದೆ.

ರೂಪಾ ಕುಮಾರಸ್ವಾಮಿ ಅಡಿಕೆ ಮರಗಳನ್ನು ಕಡಿದು ಹಾಕಿದ ಆರೋಪಿ ಸೊಸೆ.ಆರೋಪಿ ರೂಪಾಳನ್ನು ಪೊಲೀಸರು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ.

ಚಿದಾನಂದ ಸ್ವಾಮಿ ದಂಪತಿಗೆ ಹಿರಿಯ ಪುತ್ರ ಕುಮಾರಸ್ವಾಮಿಗೆ ರೂಪಾಳೊಂದಿಗೆ ಮದುವೆ ಮಾಡಿಸಲಾಗಿತ್ತು. ರೂಪಾ, ಹಲವಾರು ಬಾರಿ ಆಸ್ತಿಯಲ್ಲಿ ಪಾಲು ಕೇಳಿತ್ತಿದ್ದಳು. ಅಲ್ಲದೇ ಮಾವ ಚಿದಾನಂದಸ್ವಾಮಿ ಬಳಿ 8 ಲಕ್ಷ ರೂಪಾಯಿ ‌ಪಡೆದು ಮನೆ ಕೂಡ ಕಟ್ಟಿಸಿಕೊಂಡಿದ್ದಳು. ಆದರೆ ಅದೇನಾಯ್ತೋ ಗೊತ್ತಿಲ್ಲ ಅತ್ತೆ, ಮಾವನ ಮೇಲಿದ್ದ ಸಿಟ್ಟಿಗೆ 40ಕ್ಕೂ ಹೆಚ್ಚು ಅಡಿಕೆ ಮರ ಕಡಿದು ಹಾಕಿದ್ದಾಳೆ.ಈ ಸಂಬಂಧ ಚಿದಾನಂದ ಸ್ವಾಮಿಯವರು ಪೊಲೀಸರಿಗೆ ದೂರು ನೀಡಿದ್ದಾರೆ.

ವಯಸ್ಸಾಗಿರುವ ನಮ್ಮನ್ನ ಸರಿಯಾಗಿ ನೋಡಿಕೊಳ್ಳದೆ ಸೊಸೆ ನಮ್ಮ ಮೇಲೆ ಹಲ್ಲೆ ಮಾಡುತ್ತಿದ್ದಾಳೆ. ಅಡಿಕೆ ಮರಗಳನ್ನು ಕಡಿದು ಹಾಕಿದ್ದಾಳೆ ಎಂದು ಆರೋಪಿಸಿ ಘಟನೆ ಸಂಬಂಧ ದಾವಣಗೆರೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net