

ಕನಕಪುರ: ತಂದೆ ತನ್ನ ಮಗಳ ಮೇಲೆಯೇ ಅತ್ಯಾಚಾರ ಎಸಗಿರುವ ಘಟನೆ ತಾಲೂಕಿನ ಕೋಡಿಹಳ್ಳಿ ಹೋಬಳಿ ಕೆಬ್ಬರೆ ಗ್ರಾಮದಲ್ಲಿ ನಡೆದಿದೆ. ವಿಷಯ ತಿಳಿದ ಪತ್ನಿ, ಪತಿಗೆ ಪೊರಕೆ ಏಟುಗಳನ್ನು ನೀಡಿದ್ದು, ಆತ ಪರಾರಿಯಾಗಿದ್ದಾನೆ.
ಕೋಡಿಹಳ್ಳಿ ಠಾಣೆಯಲ್ಲಿ ಪೋಕ್ಸೊ ಕಾಯ್ದೆ ಅಡಿ ಪ್ರಕರಣ ದಾಖಲಾಗಿದೆ. ಮಂಗಳವಾರ ಕೆಬ್ಬರೆ ಗ್ರಾಮದ 40 ವರ್ಷದ ವ್ಯಕ್ತಿ ಮನೆಯಲ್ಲಿ ಯಾರೂ ಇಲ್ಲದ ವೇಳೆ ಮಗಳ ಮೇಲೆ ಅತ್ಯಾಚಾರ ಎಸಗಿದ್ದಾನೆ. ಪತ್ನಿಯೇ ಕೋಡಿಹಳ್ಳಿ ಠಾಣೆಗೆ ತೆರಳಿ ಪತಿಯ ವಿರುದ್ಧ ದೂರು ನೀಡಿದ್ದಾಳೆ. ಸ್ಥಳಕ್ಕೆ ಸಬ್ ಇನ್‌ಸ್ಪೆಕ್ಟರ್ ರವಿಕುಮಾರ್ ಮತ್ತು ಸಿಬ್ಬಂದಿ ತೆರಳಿ ಪರಿಶೀಲನೆ ನಡೆಸಿದರು.