ನೇತಾಜಿ ಸುಭಾಷ್ ಚಂದ್ರ ಬೋಸ್ ಜನ್ಮ ದಿನಾಚರಣೆ

dvg-aidso.jpg
Published on

ದಾವಣಗೆರೆ  : ಎಐಡಿಎಸ್‌ಒ ಜಿಲ್ಲಾ ಸಮಿತಿ ವತಿಯಿಂದ ಸ್ವಾತಂತ್ರ್ಯ ಸಂಗ್ರಾಮದ ಮಹಾನ್ ಕ್ರಾಂತಿಕಾರಿ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ  128ನೇ ಜನ್ಮದಿನವನ್ನು ನಗರದ ವಿವಿಧ ಶಾಲೆ, ಕಾಲೇಜುಗಳಲ್ಲಿ ಗುರುವಾರ ಆಚರಿಸಲಾಯಿತು.  ಯು.ಬಿ.ಡಿ.ಟಿ ಇಂಜನಿಯರಿಂಗ್ ಕಾಲೇಜು, ಜೆ.ಐ.ಟಿ ಪಾಲಿಟೆಕ್ನಿಕ್, ಡಿ.ಆರ್.ಎಂ ಪದವಿಪೂರ್ವ ಕಾಲೇಜು, ರಾಜನಹಳ್ಳಿ ಸೀತಮ್ಮ ಬಾಲಕಿಯರ ಶಾಲೆ ಮತ್ತು ಪದವಿಪೂರ್ವ ಕಾಲೇಜು, ಎ.ಆರ್.ಜಿ ಪಿಯು, ಬಂಕಾಪುರ ನಂಜುಂಡಪ್ಪ ಹಿರಿಯ ಪ್ರಾಥಮಿಕ ಶಾಲೆ, ಬಸಾಪುರ ಗ್ರಾಮದಲ್ಲಿ, ಬಾಲಕರ ಹಾಗೂ ಬಾಲಕಿಯರ ವಸತಿ ನಿಲಯದಲ್ಲಿ ನೇತಾಜಿ ಅವರಿಗೆ ಗೌರವ ನಮನ ಸಲ್ಲಿಸಲಾಯಿತು.  ವಿದ್ಯಾರ್ಥಿಗಳಲ್ಲಿ ಉನ್ನತ ನೀತಿ, ನೈತಿಕತೆ, ಸಂಸ್ಕೃತಿಯನ್ನು ಬೆಳೆಸುವುದು, ನೇತಾಜಿ ಅವರ ವಿಚಾರ, ಆದರ್ಶಗಳನ್ನು ವಿದ್ಯಾರ್ಥಿಗಳು ಮೈಗೂಡಿಸಿಕೊಳ್ಳಬೇಕು ಎಂದು ಸಾರಲಾಯಿತು.  ಪ್ರಸಕ್ತ ಸಾಮಾಜಿಕ ವ್ಯವಸ್ಥೆಯಲ್ಲಿ ಶಿಕ್ಷಣದ ಖಾಸಗೀಕರಣ, ನಿರುದ್ಯೋಗ ಮತ್ತು ಹೆಣ್ಣು ಮಕ್ಕಳ ಮೇಲಿನ ದೌರ್ಜನ್ಯ, ಅತ್ಯಾಚಾರ ಪ್ರಕರಣಗಳು ಕೊನೆಯಾಗಬೇಕು. ಸಾಮಾಜಿಕ ವಾತಾವರಣ ಕಲುಷಿತಗೊಂಡು ವಿದ್ಯಾರ್ಥಿಗಳ ಮನಸ್ಸು ಹಾಳಾಗುತ್ತಿದೆ. ಮಾನವೀಯ ಮೌಲ್ಯಗಳು ಕುಸಿಯುತ್ತಿವೆ ಎಂದು ತಿಳಿಸಲಾಯಿತು. ಮುಖ್ಯೋಪಾಧ್ಯಾಯರು, ಶಿಕ್ಷಕರು, ಪಾಲಕರು, ವಿದ್ಯಾರ್ಥಿಗಳು ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net