ಜಿಲ್ಲಾಡಳಿತದಿಂದ ಅಂಬೇಡ್ಕರ್ ಜಯಂತಿ ಆಚರಣೆ

dvg-jilladalitha-14-1.jpg
Published on

ದಾವಣಗೆರೆ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಸಮಾಜ ಕಲ್ಯಾಣ ಇಲಾಖೆ ಮತ್ತು ಮಹಾನಗರ ಪಾಲಿಕೆ ವತಿಯಿಂದ ಶುಕ್ರವಾರ ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ, ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಜಯಂತಿಯನ್ನು ನೀತಿ ಸಂಹಿತೆ ಹಿನ್ನೆಲೆಯಲ್ಲಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಆಚರಿಸಲಾಯಿತು.
 ಜಿಲ್ಲಾಧಿಕಾರಿ ಶಿವಾನಂದ ಕಾಪಶಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಸುರೇಶ್ ಇಟ್ನಾಳ್, ಅಪರ ಜಿಲ್ಲಾಧಿಕಾರಿ ಪಿ.ಎನ್. ಲೋಕೇಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ. ರಿಷ್ಯಂತ್, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ನಾಗರಾಜ್, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಮಂಜನಾಯ್ಕ್, ಅಲ್ಪಸಂಖ್ಯಾತರ ವರ್ಗಗಳ ಕಲ್ಯಾಣಾಧಿಕಾರಿ ಮಲ್ಲಿಕಾರ್ಜುನ್ ಇದ್ದರು.
 ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಬಿ. ವಾಮದೇವಪ್ಪ, ದಲಿತ ಸಂಘರ್ಷ ಸಮಿತಿ ರಾಜ್ಯ ಸಂಘಟನಾ ಸಂಚಾಲಕ ಕಬ್ಬಳ್ಳಿ ಮೈಲಪ್ಪ, ರೈತ ಸಂಘದ ಕಾರ್ಯಾಧ್ಯಕ್ಷ ಚಿನ್ನಸಮುದ್ರ ಶೇಖರ್ ನಾಯ್ಕ್, ಸಮಗಾರ ಸಮಾಜದ ಜಿಲ್ಲಾಧ್ಯಕ್ಷ ಫಕೀರಪ್ಪ ಪಾಲ್ಗೊಂಡಿದ್ದರು. ಕಲಾವಿದರಾದ ಐರಣಿ ಚಂದ್ರು ಜಾಗೃತಿ ಗೀತೆ ಹಾಡಿದರು.
 

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net