ಐಸಿಪಿಎಲ್‌ಗೆ ರಾಜ್ಯ ಶ್ರೇಷ್ಠ ರಫ್ತು ಪ್ರಶಸ್ತಿ ಪ್ರದಾನ

dvg-shamanuru-22.jpg
Published on

ದಾವಣಗೆರೆ : ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಒಡೆತನದ ಮುಧೋಳ್ ತಾಲೂಕಿನ ಉತ್ತೂರಿನಲ್ಲಿರುವ ಇಂಡಿಯನ್ ಕೇನ್ ಪವರ್ ಲಿಮಿಟೆಡ್(ಐಸಿಪಿಎಲ್) ರಾಜ್ಯ ಶ್ರೇಷ್ಠ ರಫ್ತು ಪ್ರಶಸ್ತಿಗೆ ಭಾಜನವಾಗಿದೆ.
 ಬೆಂಗಳೂರಿನ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಶನಿವಾರ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಐಸಿಪಿಎಲ್ ಚೇರ್ಮನ್ ಡಾ. ಶಾಮನೂರು ಶಿವಶಂಕರಪ್ಪ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶಸ್ತಿ ನೀಡಿ ಗೌರವಿಸಿದರು.
 ಈ ಸಂದರ್ಭದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಭಾರೀ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ.ಬಿ. ಪಾಟೀಲ್, ಸಿಎಂ ರಾಜಕೀಯ ಕಾರ‌್ಯದರ್ಶಿ ಡಾ. ಕೆ. ಗೋವಿಂದರಾಜ್ ಭಾಗವಹಿಸಿದ್ದರು. ಶಿವಾಜಿ ನಗರ ಶಾಸಕ ರಿಜ್ವಾನ್ ಅರ್ಷದ್ ಅಧ್ಯಕ್ಷತೆ ವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net