

ದಾವಣಗೆರೆ : ಮಾಧ್ಯಮ ಕ್ಷೇತ್ರದಲ್ಲಿ ಸುದೀರ್ಘ ಸೇವೆ ಸಲ್ಲಿಸಿದ್ದಕ್ಕಾಗಿ ಹಿರಿಯ ಪತ್ರಕರ್ತ ಎ.ಎಲ್. ತಾರಾನಾಥ್ ‘ರಾಷ್ಟ್ರೀಯ ವಿಶ್ವಕರ್ಮ ರತ್ನ’ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಸೆ. 28ರಂದು ನವದೆಹಲಿಯ ಕರ್ನಾಟಕ ಸಂಘದ ಸಭಾಂಗಣದಲ್ಲಿ ಆಯೋಜನೆ ಮಾಡಿರುವ ರಾಷ್ಟ್ರಮಟ್ಟದ ವಿಶ್ವಕರ್ಮ ಸಮ್ಮೇಳನದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು. ವಿ. ಸೋಮಣ್ಣ ಸೇರಿ ಕೇಂದ್ರದ ವಿವಿಧ ಸಚಿವರು, ಹಿರಿಯ ಅಧಿಕಾರಿಗಳು, ಗಣ್ಯರು ಪಾಲ್ಗೊಳ್ಳಲಿದ್ದಾರೆ. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ದೇಶದ 25 ಜನ ಸಾಧಕರಿಗೆ ರಾಷ್ಟ್ರೀಯ ವಿಶ್ವಕರ್ಮ ರತ್ನ ಪ್ರಶಸ್ತಿ ನೀಡಲಾಗುತ್ತಿದೆ. ರಾಜ್ಯದಿಂದ 8 ಮಂದಿ ಆಯ್ಕೆಯಾಗಿದ್ದಾರೆ ಎಂದು ವಿಶ್ವಕರ್ಮ ಸಮ್ಮೇಳನದ ರಾಷ್ಟ್ರೀಯ ಅಧ್ಯಕ್ಷ ಮಾರುತಿ ಬಡಿಗೇರ ತಿಳಿಸಿದ್ದಾರೆ.