ಕೆ.ರಾಘವೇಂದ್ರ ನಾಯರಿಗೆ ಪ್ರಶಸ್ತಿ

DVG-RaGAVENDRA-NAYARI.jpg
Published on

ದಾವಣಗೆರೆ : ಸಾಮಾಜಿಕ ಸೇವೆ ಸೇರಿ ಹತ್ತು ಹಲವು ಕ್ಷೇತ್ರಗಳಲ್ಲಿ ಸಕ್ರಿಯವಾಗಿರುವ ಕಾರ್ಮಿಕ ಮುಖಂಡ ಕೆ.ರಾಘವೇಂದ್ರ ನಾಯರಿ  ‘ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ರತ್ನ’ ರಾಜ್ಯ ಪ್ರಶಸ್ತಿಗೆ ಭಾಜನರಾಗಿದ್ದಾರೆ.  ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಸಾಮಾಜಿಕ ಧಾರ್ಮಿಕ ಸಾಂಸ್ಕೃತಿಕ ಸಂಘ ಕೊಡ ಮಾಡುವ ಪ್ರಶಸ್ತಿಯನ್ನು ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜಯಂತ್ಯುತ್ಸವದ ಅಂಗವಾಗಿ ಬೆಂಗಳೂರಿನ ಗಾಂಧಿ ಭವನದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಪ್ರದಾನ ಮಾಡಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net