

ದಾವಣಗೆರೆ : ವಿಶ್ವವಿದ್ಯಾಲಯ ವ್ಯಾಪ್ತಿಯ ಭರಮಸಾಗರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರೊ. ಕೆ. ಲೋಕೇಶ್ ನಾಯಕ್ ಅವರಿಗೆ ರಾಷ್ಟ್ರಿಯ ಸೇವಾ ಯೋಜನೆಯ (ಎನ್‌ಎಸ್‌ಎಸ್) ಉತ್ತಮ ಕಾರ್ಯಕ್ರಮ ಅಧಿಕಾರಿ ರಾಷ್ಟ್ರಮಟ್ಟದ ಪ್ರಶಸ್ತಿ ಲಭಿಸಿದೆ. ದೆಹಲಿಯಲ್ಲಿ ಸೋಮವಾರ, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರಶಸ್ತಿ ಪ್ರದಾನ ಮಾಡಿದರು. ಕಾಲೇಜಿನ ಪ್ರಾಚಾರ್ಯೆ ಡಾ. ಎಸ್. ಶಶಿಕಲಾ ಇದ್ದರು. ಸ್ವಚ್ಛತಾ ಅಭಿಯಾನ, ರಕ್ತದಾನ ಅಭಿಯಾನ, ಚಿತ್ರದುರ್ಗದ ಕಾರಾಗೃಹದಲ್ಲಿ ಕೈದಿಗಳಿಗಾಗಿ ಆರೋಗ್ಯ ತಪಾಸಣೆ ಶಿಬಿರ ಇನ್ನಿತರ ಸೇವಾ ಚಟುವಟಿಕೆಗಳನ್ನು ಆಯೋಜನೆ ಮಾಡಿದ್ದು ಪ್ರೊ. ಕೆ. ಲೋಕೇಶ್ ನಾಯಕ್ ಅವರ ಪ್ರಮುಖ ಸಾಧನೆಗಳಾಗಿವೆ. ಈ ಸಾಧನೆಯ ಬಗ್ಗೆ ದಾವಣಗೆರೆ ವಿವಿ ಕುಲಪತಿ ಪ್ರೊ. ಬಿ.ಡಿ. ಕುಂಬಾರ, ಕುಲಸಚಿವ (ಆಡಳಿತ) ಎಸ್.ಬಿ. ಗಂಟಿ ಮತ್ತು ಎನ್‌ಎಸ್‌ಎಸ್ ಕಾರ್ಯಕ್ರಮ ಸಂಯೋಜನಾಧಿಕಾರಿ ಡಾ. ಅಶೋಕ ಕುಮಾರ್ ವಿ. ಪಾಳೇದ ಹರ್ಷ ವ್ಯಕ್ತಪಡಿಸಿದ್ದಾರೆ.