ಏರೋಬಿಕ್ಸ್ ನೊಂದಿಗೆ ಮತದಾನ ಜಾಗೃತಿ

aro.jpg
Published on

ದಾವಣಗೆರೆ : ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಪೊಲೀಸ್ ಇಲಾಖೆ ಹಾಗೂ ವಿವಿಧ ಇಲಾಖೆಗಳ ವತಿಯಿಂದ ಗುರುವಾರ ಪೊಲೀಸ್ ಕವಾಯತು ಮೈದಾನದಲ್ಲಿ ಮತದಾನ ಜಾಗೃತಿಗಾಗಿ ಏರೋಬಿಕ್ಸೃ್ ಏರ್ಪಡಿಸಲಾಗಿತ್ತು.
 ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ಮಾತನಾಡಿ, ಮೇ 7 ರಂದು ಮತದಾನ ನಡೆಯಲಿದ್ದು ಎಲ್ಲರೂ ತಪ್ಪದೇ ಮತಗಟ್ಟೆಗೆ ಬಂದು ಮತ ಚಲಾಯಿಸಬೇಕು ಎಂದು ಮನವಿ ಮಾಡಿದರು.
 ಏರೋಬಿಕ್ಸೃ್ನಿಂದ ಅನಾರೋಗ್ಯವನ್ನು ತಡೆಗಟ್ಟಿ ದೈಹಿಕ ಸಾಮರ್ಥ್ಯ ಹೆಚ್ಚಾಗಲಿದೆ. ಅದೇ ರೀತಿ ಎಲ್ಲರೂ ಮತದಾನ ಮಾಡುವುದರಿಂದ ಪ್ರಜಾಪ್ರಭುತ್ವದ ಮೌಲ್ಯ ಹೆಚ್ಚಾಗಲಿದ್ದು ಮೌಲ್ಯಯುತ ಚುನಾವಣೆಯಾಗಲಿದೆ ಎಂದರು.
 ನಿಮ್ಮ ಮತ ನಿಮ್ಮ ಹಕ್ಕು, ನೀವೆಲ್ಲರೂ ತಪ್ಪದೆ ಮತದಾನ ಮಾಡಿ, ಮತದಾನ ಪ್ರಜಾಪ್ರಭುತ್ವದ ಹೃದಯ ಬಡಿತ, ಮತದಾನ ಮಾಡೋಣ, ದೇಶದ ಅಭಿವೃದ್ಧಿಗೆ ಕೈಜೋಡಿಸೋಣ ಎಂದರು.
 ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಮಲ್ಲನಾಯ್ಕ ಮತದಾರರ ಪ್ರತಿಜ್ಞಾವಿಧಿ ಬೋಧಿಸಿದರು. ಮತದಾರ ಜಾಗೃತಿ ಅಂಗವಾಗಿ ಕೆ.ಡಿ ಡ್ಯಾನ್ಸ್ ಕಂಪೆನಿಯಿಂದ ಏರೋಬಿಕ್ಸೃ್ ಡ್ಯಾನ್ಸ್ ಮಾಡಲಾಯಿತು.
 ಜಿ.ಪಂ. ಸಿಇಒ ಸುರೇಶ್ ಬಿ. ಇಟ್ನಾಳ್, ಉಪ ಕಾರ್ಯದರ್ಶಿ ಕೃಷ್ಣ ನಾಯ್ಕ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ನಾಗರಾಜ, ಡಿಡಿಪಿಐ ಕೊಟ್ರೇಶ್, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿ ಮಲ್ಲಿಕಾರ್ಜುನ ಮಠದ್, ತಹಸೀಲ್ದಾರ್ ಡಾ.ಎಂ.ಬಿ. ಅಶ್ವತ್ಥ್ ಇದ್ದರು.
 

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net