ಪರಿಸರ ಜಾಗೃತಿ ಜಾಥಾ

dvg-scouts-guide-30.jpg
Published on

ದಾವಣಗೆರೆ: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಉತ್ತರ ವಲಯ ದಾವಣಗೆರೆ ವತಿಯಿಂದ ಆರ್‌ವಿಜಿಕೆ ಶಾಲೆಯ ವಿದ್ಯಾರ್ಥಿಗಳು ಮತ್ತು ಶ್ರೀ ವಾಸವಿ ಇಂಗ್ಲಿಷ್ ಮೀಡಿಯಂ ಪ್ರೈಮರಿ ಸ್ಕೂಲ್ ಸಹಭಾಗಿತ್ವದಲ್ಲಿ ಇತ್ತೀಚೆಗೆ ಜನ ಜಾಗೃತಿ ಜಾಥಾ ಹಮ್ಮಿಕೊಳ್ಳಲಾಗಿತ್ತು.
 ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆ ಉತ್ತರ ವಲಯ ಉಪಾಧ್ಯಕ್ಷ, ಕೆಎಸ್‌ಎಂಸಿಎ ದಾವಣಗೆರೆ ಶಾಖಾ ಕಚೇರಿ ವ್ಯವಸ್ಥಾಪಕ ಮಾರುತಿ ಆರ್. ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಆರ್‌ವಿಜಿಕೆ ಶಾಲೆಯ ಮುಖ್ಯ ಶಿಕ್ಷಕ ಕೆ.ಸಿ. ನಿರಂಜನ್, ಸ್ಥಳೀಯ ಸಂಸ್ಥೆಯ ಕಾರ್ಯದರ್ಶಿ ಸುರೇಶ್ ಭಾಗವಹಿಸಿದ್ದರು. 400 ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net