ರಾಜ್ಯಮಟ್ಟದ ಬಾಸ್ಕೆಟ್‌ಬಾಲ್ ಪಂದ್ಯಾವಳಿಗೆ ಚಾಲನೆ

ball_20230922004035945.jpg
Published on

ದಾವಣಗೆರೆ : ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಜನ್ಮದಿನದ ಅಂಗವಾಗಿ ದಾವಣಗೆರೆ ಬಾಸ್ಕೆಟ್‌ಬಾಲ್ ಕ್ಲಬ್ ವತಿಯಿಂದ ರಾಜ್ಯಮಟ್ಟದ ಆಹ್ವಾನಿತ ಹೊನಲು ಬೆಳಕಿನ ಬಾಸ್ಕೆಟ್‌ಬಾಲ್ ಪಂದ್ಯಾವಳಿಗೆ ಜಿಲ್ಲಾ ಕ್ರೀಡಾಂಗಣದಲ್ಲಿ ಗುರುವಾರ ರಾತ್ರಿ ಚಾಲನೆ ದೊರೆಯಿತು.
 ಪುರುಷರ ವಿಭಾಗದಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಿಂದ 8 ತಂಡಗಳು, 18 ವರ್ಷ ವಯೋಮಿತಿಯ ಬಾಲಕರ ವಿಭಾಗದಲ್ಲಿ 6 ತಂಡಗಳು, 16 ವರ್ಷ ವಯೋಮಿತಿಯ ಬಾಲಕಿಯರ ವಿಭಾಗದಲ್ಲಿ 5 ತಂಡಗಳು ಭಾಗವಹಿಸಿವೆ.
 ಉದ್ಘಾಟನಾ ಕಾರ್ಯಕ್ರಮದಲ್ಲಿ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ ಕೆ. ಶೆಟ್ಟಿ ಮಾತನಾಡಿ, ಕ್ರೀಡಾ ಕ್ಷೇತ್ರದಲ್ಲಿ ದಾವಣಗೆರೆಯ ಪ್ರತಿಭೆಗಳ ಕೊಡುಗೆ ಹಾಗೂ ಎಸ್.ಎಸ್. ಮಲ್ಲಿಕಾರ್ಜುನ್ ಯುವಜನ ಸೇವೆ ಮತ್ತು ಕ್ರೀಡಾ ಸಚಿವರಿದ್ದಾಗ ನೀಡಿದ ಪ್ರೋತ್ಸಾಹದ ಬಗ್ಗೆ ತಿಳಿಸಿದರು.
 ರಾಜ್ಯ ಬಾಸ್ಕೆಟ್‌ಬಾಲ್ ಸಂಸ್ಥೆಯ ಉಪಾಧ್ಯಕ್ಷ ಎಸ್. ಗುಣಶೇಖರ್, ದಾವಣಗೆರೆ ಬಾಸ್ಕೆಟ್‌ಬಾಲ್ ಕ್ಲಬ್ ಗೌರವ ಅಧ್ಯಕ್ಷ ಸಿ. ರಾಮಮೂರ್ತಿ, ಅಧ್ಯಕ್ಷ ಆರ್. ಕಿರಣ್ ಕುಮಾರ್, ಉಪಾಧ್ಯಕ್ಷ ಜಿ.ಎಂ. ವಿಜಯಕುಮಾರ್, ಕಾರ್ಯದರ್ಶಿ ಆರ್. ವೀರೇಶ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net