ಅರಸು ಯೋಜನೆಗಳ ಸಮರ್ಪಕ ಅನುಷ್ಠಾನ

dvg-devaraja-arasu.jpg
Published on

ದಾವಣಗೆರೆ  : ಸಾಮಾಜಿಕ ಅಸಮಾನತೆ ನಿವಾರಣೆಗಾಗಿ ಡಿ. ದೇವರಾಜ ಅರಸು ಅವರು ಅನುಷ್ಠಾನಗೊಳಿಸಿದ ಯೋಜನೆಗಳು ಸಮರ್ಪಕವಾಗಿ ಅನುಷ್ಠಾನಗೊಂಡಾಗ ಮಾತ್ರ ಜನ್ಮ ದಿನಾಚರಣೆ ಸಾರ್ಥಕವಾಗುತ್ತದೆ ಎಂದು ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ಹೇಳಿದರು.  ಜಿಲ್ಲಾಡಳಿತ, ಜಿ.ಪಂ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಮಹಾನಗರ ಪಾಲಿಕೆ ಸಹಯೋಗದಲ್ಲಿ ಬುಧವಾರ ಜಿಲ್ಲಾಡಳಿತ ಭವನದಲ್ಲಿ ಆಯೋಜಿಸಲಾಗಿದ್ದ ಮಾಜಿ ಸಿಎಂ ಡಿ. ದೇವರಾಜ ಅರಸು ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು.  ಯುವಜನತೆ ಗಾಂಧೀಜಿ ಮತ್ತು ಅರಸು ಅವರ ಜೀವನ ಚರಿತ್ರೆ ಅರಿತುಕೊಳ್ಳಬೇಕು. ಅರಸು ಆಡಳಿತ ಅವಧಿಯಲ್ಲಿ ಉಳುವವನೇ ಭೂಮಿ ಒಡೆಯ, ಜೀತ ಪದ್ಧತಿ ನಿರ್ಮೂಲನೆ ಸೇರಿ ಹಲವಾರು ಪ್ರಗತಿಪರ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ಮಲ ಹೊರುವ ಮತ್ತು ಜೀತ ಪದ್ಧತಿಯನ್ನು ನಿರ್ಮೂಲನೆ ಮಾಡಿ ಹಲವಾರು ಕುಟುಂಬಗಳಿಗೆ ಮುಕ್ತಿ ಕಲ್ಪಿಸಿಕೊಟ್ಟರು ಎಂದು ಸ್ಮರಿಸಿದರು.  ಅಪರ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ್, ಹೆಚ್ಚುವರಿ ಎಸ್ಪಿ ಪರಮೇಶ್ವರ್ ಹೆಗಡೆ, ದೂಡಾ ಆಯುಕ್ತ ಹುಲಿಮನಿ ತಿಮ್ಮಣ್ಣ, ಜಿ.ಪಂ. ಉಪ ಕಾರ್ಯದರ್ಶಿ ಮಮತಾ ಹೊಸಗೌಡರ ಇದ್ದರು.  

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net