ರಾಜೀವ್ ಗಾಂಧಿ, ದೇವರಾಜ ಅರಸು ಜನ್ಮದಿನಾಚರಣೆ

dvg-Rajiv-Gandhi-19.jpg
Published on

ದಾವಣಗೆರೆ : ಜಿಲ್ಲಾ ಕಾಂಗ್ರೆಸ್‌ನಿಂದ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಮತ್ತು ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ಜನ್ಮ ದಿನಾಚರಣೆ ಭಾನುವಾರ ಬೆಳಗ್ಗೆ 11.30ಕ್ಕೆ ಪಕ್ಷದ ಜಿಲ್ಲಾ ಕಚೇರಿಯಲ್ಲಿ ನಡೆಯಲಿದೆ.
 ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್.ಬಿ. ಮಂಜಪ್ಪ ಅಧ್ಯಕ್ಷತೆ ವಹಿಸುವರು. ಈ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಮುಖಂಡರು, ಯುವ ಕಾಂಗ್ರೆಸ್, ಮಹಿಳಾ ಕಾಂಗ್ರೆಸ್, ಜಿಲ್ಲಾ ಸೇವಾದಳ, ಕಾರ್ಮಿಕ ವಿಭಾಗ, ಒ.ಬಿ.ಸಿ.ವಿಭಾಗದ ಎನ್.ಎಸ್.ಯು.ಐ., ಅಲ್ಪಸಂಖ್ಯಾತ, ಹಿಂದುಳಿದ ವರ್ಗ, ಪರಿಶಿಷ್ಟ ಜಾತಿ ಮತ್ತು ಪಂಗಡ, ವೈದ್ಯಕೀಯ, ವಕೀಲರ ಘಟಕಗಳ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಭಾಗವಹಿಸಬೇಕು.
 ಗ್ರಾಮ ಪಂಚಾಯಿತಿ ಹಾಲಿ ಮತ್ತು ಮಾಜಿ ಸದಸ್ಯರು, ಎಪಿಎಂಸಿ ಮಾಜಿ ಸದಸ್ಯರು, ತಾಲೂಕು ಪಂಚಾಯಿತಿ ಮಾಜಿ ಸದಸ್ಯರು ಹಾಗೂ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯರು ಮತ್ತು ಮಹಾನಗರ ಪಾಲಿಕೆ ಹಾಲಿ ಮತ್ತು ಮಾಜಿ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಿನೇಶ್.ಕೆ.ಶೆಟ್ಟಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net