ಸಚಿವ ಮಲ್ಲಿಕಾರ್ಜುನ್ ಜನ್ಮದಿನಕ್ಕೆ ಸೇವಾ ಕಾರ್ಯಗಳ ಮೆರುಗು

SS-Mallikarjun-dvg-south_20230922005908208.jpg
Published on

ದಾವಣಗೆರೆ : ಗಣಿ ಮತ್ತು ಭೂವಿಜ್ಞಾನ ಹಾಗೂ ತೋಟಗಾರಿಕೆ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಶುಕ್ರವಾರ 56ನೇ ವರ್ಷಕ್ಕೆ ಪದಾರ್ಪಣೆ ಮಾಡಲಿದ್ದು ಜನ್ಮದಿನವನ್ನು ಸರಳವಾಗಿ ಆಚರಿಸಿಕೊಳ್ಳಲಿದ್ದಾರೆ.
 ಬೆಳಗ್ಗೆ ನಗರ ದೇವತೆ ದುರ್ಗಾಂಬಿಕಾ ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಲಿದ್ದಾರೆ. ನಂತರ ಕುಟುಂಬದ ಸದಸ್ಯರು, ಹಿತೈಷಿಗಳು, ಅಭಿಮಾನಿಗಳ ಸಮ್ಮುಖದಲ್ಲಿ ಜನ್ಮದಿನದ ಸಂಭ್ರಮ ಹಂಚಿಕೊಳ್ಳಲಿದ್ದಾರೆ.
 ಮಲ್ಲಿಕಾರ್ಜುನ್ ಅಭಿಮಾನಿಗಳು ತಮ್ಮ ನಾಯಕನ ಜನ್ಮದಿನದ ಅಂಗವಾಗಿ ವಿವಿಧ ಸೇವಾ ಕಾರ್ಯಕ್ರಮಗಳನ್ನು ಆಯೋಜಿಸಿದ್ದಾರೆ. ಮಧ್ಯಾಹ್ನ 1 ಗಂಟೆಗೆ ತುರ್ಚಘಟ್ಟ ಗ್ರಾಮದಲ್ಲಿರುವ ನಿರಾಶ್ರಿತರ ಕೇಂದ್ರಕ್ಕೆ ಮಲ್ಲಿಕಾರ್ಜುನ್ ಭೇಟಿ ನೀಡಲಿದ್ದಾರೆ. 1.30ಕ್ಕೆ ಎಸ್.ಒ.ಜಿ ಕಾಲನಿಯ ಸರ್ಕಾರಿ ಶಾಲೆ ಆವರಣದಲ್ಲಿ ಅನ್ನ ಸಂತರ್ಪಣೆ ನೆರವೇರಲಿದೆ.
 ಸಂಜೆ 4 ಗಂಟೆಗೆ ಎಪಿಎಂಸಿ ಆವರಣದ ಕೌಶೆಡ್‌ನಲ್ಲಿ ಸಮಗ್ರ ಕೃಷಿ ಪದ್ಧತಿ ಯೋಜನೆಯಡಿ ರೈತರಿಗೆ ಹಸುಗಳನ್ನು ಸಚಿವರು ವಿತರಿಸುವರು. ಸಂಜೆ 6.30ಕ್ಕೆ ಎಂಸಿಸಿ ‘ಬಿ’ ಬ್ಲಾಕ್‌ನಲ್ಲಿ ಈಜುಕೊಳದ ಉದ್ಘಾಟನೆ ನಡೆಯಲಿದೆ.
 ಸಂಜೆ 7ಕ್ಕೆ ಜಿಲ್ಲಾ ಕ್ರೀಡಾಂಗಣದಲ್ಲಿ ರಾಜ್ಯಮಟ್ಟದ ಆಹ್ವಾನಿತ ಹೊನಲು ಬೆಳಕಿನ ಬಾಸ್ಕೆಟ್‌ಬಾಲ್ ಪಂದ್ಯಾವಳಿಯಲ್ಲಿ ಬಹುಮಾನ ವಿತರಣೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು.
 ...

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net