

ದಾವಣಗೆರೆ: ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಬಂದಿದ್ದರೂ ಮುಖ್ಯಮಂತ್ರಿ ಆಯ್ಕೆ ವಿಷಯದಲ್ಲಿ ವೈಫಲ್ಯ ಕಂಡಿದೆ. ಜನರು ಗೊಂದಲದಲ್ಲಿ ಸಿಲುಕಿದ್ದು, ರಾಜಕೀಯ ಅರಾಜಕತೆ ಸೃಷ್ಟಿಯಾಗಿದೆ. ಹೀಗಾಗಿ ವಿಧಾನಸಭೆಯನ್ನು ಅಮಾನತಿನಲ್ಲಿಟ್ಟು ರಾಷ್ಟ್ರಪತಿ ಆಳ್ವಿಕೆ ಜಾರಿಗೊಳಿಸಿ ಎಂದು ಬಿಜೆಪಿ ಮುಖಂಡ, ಮಾಜಿ ಎಪಿಎಂಸಿ ಅಧ್ಯಕ್ಷ ಕೊಳೇನಹಳ್ಳಿ ಬಿ.ಎಂ.ಸತೀಶ್ ಒತ್ತಾಯಿಸಿದ್ದಾರೆ.
ಕೆಲವೇ ದಿನಗಳಲ್ಲಿ ಶಾಲಾ ಕಾಲೇಜು ಪ್ರಾರಂಭವಾಗಲಿದ್ದು, ಮುಂಗಾರು ಸನಿಹದಲ್ಲಿರುವುದರಿಂದ ಕೃಷಿ ಚಟುವಟಿಕೆಗಳು ಆರಂಭವಾಗಲಿವೆ. ಶಾಲಾ-ಕಾಲೇಜು ಪ್ರವೇಶಕ್ಕೆ ಮತ್ತು ಕೃಷಿಕರ ಬೀಜ ಗೊಬ್ಬರ ಇತ್ಯಾದಿಗಳಿಗೆ ದಾಖಲಾತಿಗಳಿಗಾಗಿ ಸರ್ಕಾರಿ ಕಚೇರಿಗಳಿಗೆ ಜನರ ಅಲೆದಾಟ ಶುರುವಾಗಲಿದೆ.
ಪ್ರತಿ ಮನೆಗೆ ಮಾಸಿಕ 200 ಯೂನಿಟ್ ಉಚಿತ ವಿದ್ಯುತ್ ನೀಡುವ ಕಾಂಗ್ರೆಸ್ ಗ್ಯಾರಂಟಿಯಿಂದ ಗ್ರಾಮೀಣ ಪ್ರದೇಶದ ಜನ ವಿದ್ಯುತ್ ಬಿಲ್ ಪಾವತಿಸುತ್ತಿಲ್ಲ. ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಉಚಿತ ಪ್ರಯಾಣ ಎಂಬ ಗ್ಯಾರಂಟಿ ಇರುವುದರಿಂದ ಮಹಿಳೆಯರು ಬಸ್ ಚಾರ್ಜ್ ಕೊಡಲು ನಿರಾಕರಿಸುತ್ತಿದ್ದಾರೆ.