

ದಾವಣಗೆರೆ : ರಾಜ್ಯದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಬಿಜೆಪಿ ನಾಯಕತ್ವ ನೀಡಬೇಕು ಎಂದು ಹೊನ್ನಾಳಿ ಮಾಜಿ ಶಾಸಕ ಎಂ.ಪಿ. ರೇಣುಕಾಚಾರ್ಯ ಆಗ್ರಹಿಸಿದರು.
ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, ಪಕ್ಷಕ್ಕೆ ರಾಜ್ಯದಲ್ಲಿ ನಾಯಕತ್ವ ಇಲ್ಲ. ಇದೇ ಕಾರಣಕ್ಕೆ ನಾಯಕರು ಬೇರೆ ಪಕ್ಷದ ಕಡೆ ಮುಖ ಮಾಡಿದ್ದಾರೆ. ರಾಜ್ಯಾಧ್ಯಕ್ಷರ ಬದಲಾವಣೆ ಆದರೆ ಹೊಸ ತಂಡ ಬರುತ್ತದೆ. ವ್ಯಕ್ತಿಗಿಂತ ಪಕ್ಷ ಮುಖ್ಯ ಎನ್ನುವರು ತಮ್ಮದೇ ಗುಂಪು ಕಟ್ಟಿಕೊಂಡಿದ್ದಾರೆ ಎಂದು ಹೇಳಿದರು.
ಬಿಜೆಪಿ ಅವನತಿಯತ್ತ ಸಾಗಿದೆ ಎಂದು ಜನ ಮಾತಾಡಿಕೊಳ್ಳುತ್ತಿದ್ದಾರೆ. ಯಡಿಯೂರಪ್ಪ ಅವರನ್ನು ರಾಜಕೀಯವಾಗಿ ಮುಗಿಸಿದರು, ಪಕ್ಷಕ್ಕೂ ಅದೇ ಗತಿ ಆಗುತ್ತಿದೆ ಎಂದರು.
...