

ದಾವಣಗೆರೆ: ಭಾರತ ವಿಭಜನೆಯ ಕರಾಳ ದಿನವನ್ನು ಖಂಡಿಸಿ ಜಿಲ್ಲಾ ಬಿಜೆಪಿಯಿಂದ ಸೋಮವಾರ ಪಂಜಿನ ಮೆರವಣಿಗೆಯನ್ನು ಆಯೋಜಿಸಲಾಗಿತ್ತು.
ಪಕ್ಷದ ಜಿಲ್ಲಾ ಕಚೇರಿಯಿಂದ ಹೊರಟ ಕಾರ್ಯಕರ್ತರು ಜಯದೇವ ವೃತ್ತದಲ್ಲಿ ಮೆರವಣಿಗೆ ಅಂತ್ಯಗೊಳಿಸಿದರು. ಭಾರತ್ ಮಾತಾ ಕೀ ಜೈ ಘೋಷಣೆ ಕೇಳಿಬಂದಿತು.
ಇದಕ್ಕೂ ಮೊದಲು ಪಕ್ಷದ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಂಸದ ಜಿಂ.ಎಂ. ಸಿದ್ದೇಶ್ವರ ಮಾತನಾಡಿ, ಸ್ವಾತಂತ್ರ್ಯ ತಂದು ಕೊಟ್ಟಿದ್ದು ಮಹಾತ್ಮ ಗಾಂಧೀಜಿ ಎನ್ನುವ ಸತ್ಯವನ್ನು ಮುಂದಿನ ಪೀಳಿಗೆಗೆ ತಿಳಿಸಬೇಕು ಎಂದರು.
ಸ್ವಾತಂತ್ರೊೃೀತ್ಸವ ದಿನದಂದು ಪ್ರತಿಯೊಬ್ಬರೂ ದೇಶದ ಬಾವುಟವನ್ನು ಮನೆಯ ಮೇಲೆ ಹಾರಿಸಬೇಕು. ಹೋರಾಟ, ಚಳವಳಿಯಿಂದ ಸ್ವಾತಂತ್ರ್ಯ ಬಂದಿದೆ. ಈ ಉತ್ಸವವನ್ನು ಸಂಭ್ರಮದಿಂದ ಆಚರಿಸಬೇಕು ಎಂದು ತಿಳಿಸಿದರು.
ಮಾಜಿ ಶಾಸಕ ಎಸ್.ಎ. ರವೀಂದ್ರನಾಥ್, ವಿಧಾನ ಪರಿಷತ್ ಮಾಜಿ ಮುಖ್ಯ ಸಚೇತಕ ಡಾ.ಎ.ಎಚ್. ಶಿವಯೋಗಿ ಸ್ವಾಮಿ, ಜಿಲ್ಲಾ ಬಿಜೆಪಿ ಅಧ್ಯಕ್ಷ ವೀರೇಶ ಹನಗವಾಡಿ, ಮಾಜಿ ಅಧ್ಯಕ್ಷ ಯಶವಂತರಾವ್ ಜಾಧವ್, ಮುಖಂಡರಾದ ಬಿ.ಎಸ್. ಜಗದೀಶ್, ರಾಜನಹಳ್ಳಿ ಶಿವಕುಮಾರ್, ಬಿ.ಎಂ. ಸತೀಶ್, ಜಿ.ಎಸ್. ಶ್ಯಾಮ್, ಧನಂಜಯ ಕಡ್ಲೇಬಾಳ್, ರಮೇಶ ನಾಯ್ಕ, ಎಲ್.ಎನ್. ಕಲ್ಲೇಶ್, ಶಿವರಾಜ ಪಾಟೀಲ್ ಪಾಲ್ಗೊಂಡಿದ್ದರು.