ವರಿಷ್ಠರನ್ನು ಭೇಟಿ ಮಾಡಿದ ಬಿಜೆಪಿ ನಿಯೋಗ

dvg-bjp_20250921000222201.jpg
Published on

ದಾವಣಗೆರೆ : ಪಕ್ಷ ವಿರೋಧಿ ಚಟುವಟಿಕೆ ನಡೆಸಿದ ಹಾಗೂ ಶಿಸ್ತು ಪಾಲನೆ ಮಾಡದಿರುವ ಬಿಜೆಪಿ ನಾಯಕರ ವಿರುದ್ಧ ಕ್ರಮ ಕೈಗೊಳ್ಳುವಂತೆ ಪಕ್ಷದ ರಾಜ್ಯ ಉಸ್ತುವಾರಿ ರಾಧಾ ಮೋಹನದಾಸ್ ಅಗರ್‌ವಾಲ್ ಅವರಿಗೆ ಜಿಲ್ಲೆಯ ನಿಯೋಗ ಮನವಿ ಮಾಡಿದೆ.  ಕೇಂದ್ರದ ಮಾಜಿ ಸಚಿವ ಜಿ.ಎಂ. ಸಿದ್ದೇಶ್ವರ ಹಾಗೂ ಹರಿಹರ ಶಾಸಕ ಬಿ.ಪಿ. ಹರೀಶ್ ನೇತೃತ್ವದ ನಿಯೋಗ ಬೆಂಗಳೂರಿನ ಯಲಹಂಕದ ರೆಸಾರ್ಟ್‌ನಲ್ಲಿ ಗುರುವಾರ ರಾತ್ರಿ ಭೇಟಿ ಮಾಡಿ ಒಂದೂವರೆ ಗಂಟೆಗೂ ಹೆಚ್ಚು ಕಾಲ ಚರ್ಚೆ ನಡೆಸಿತು.  ಲೋಕಸಭಾ ಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ ನಡೆಸಿದವರು ಮತ್ತೆ ಮುನ್ನೆಲೆಗೆ ಬಂದಿದ್ದಾರೆ. ಒಳ ಒಪ್ಪಂದ ಮಾಡಿಕೊಂಡು ಪಕ್ಷದ ಅಧಿಕೃತ ಅಭ್ಯರ್ಥಿ ವಿರುದ್ಧ ಕೆಲಸ ಮಾಡಿದವರಿಗೆ ಮಣೆ ಹಾಕಲಾಗುತ್ತಿದೆ. ಇದರಿಂದ ಪಕ್ಷದ ಕಾರ್ಯಕರ್ತರಿಗೆ ತಪ್ಪು ಸಂದೇಶ ರವಾನೆಯಾಗುತ್ತಿದೆ ಎಂದು ನಿಯೋಗ ದೂರಿದೆ ಎಂದು ಮೂಲಗಳು ಮಾಹಿತಿ ನೀಡಿವೆ.  ಬಿಜೆಪಿ ಜಿಲ್ಲಾಧ್ಯಕ್ಷ ಎನ್. ರಾಜಶೇಖರ್ ಏಕಪಕ್ಷೀಯವಾಗಿ ನಡೆದುಕೊಳ್ಳುತ್ತಿದ್ದಾರೆ. ಎಲ್ಲರನ್ನು ವಿಶ್ವಾಸಕ್ಕೆ ಪಡೆಯುವಲ್ಲಿ ವಿಫಲರಾಗಿದ್ದಾರೆ. ಅವರನ್ನು ಹುದ್ದೆಯಿಂದ ಕೂಡಲೇ ಬದಲಾಯಿಸಬೇಕು. ಮುಂಬರುವ ಚುನಾವಣೆಗೆ ಪಕ್ಷದ ಅಭ್ಯರ್ಥಿಗಳಾಗಿ ಘೋಷಣೆ ಮಾಡಿಕೊಳ್ಳುತ್ತಿರುವ ಪ್ರವೃತ್ತಿಗೆ ಕಡಿವಾಣ ಹಾಕಬೇಕು ಎಂದು ಮನವಿ ಮಾಡಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net