ರಕ್ತದಾನ ಸಾಮಾಜಿಕ ಕಳಕಳಿಯ ಕಾರ್ಯ

blood.jpg
Published on

ದಾವಣಗೆರೆ : ರಕ್ತದಾನ ಮಾಡುವುದು ಸಾಮಾಜಿಕ ಕಳಕಳಿಯ ಕಾರ್ಯವಾಗಿದೆ. ಆರೋಗ್ಯವಂತ ವ್ಯಕ್ತಿಗಳು ರಕ್ತದಾನ ಮಾಡುವುದರಿಂದ ಇನ್ನಷ್ಟು ಆರೋಗ್ಯವಾಗಿರಲು ನೆರವಾಗಲಿದೆ ಎಂದು ಎಸ್.ಎಸ್.ಕೇರ್ ಸಂಸ್ಥೆಯ ಟ್ರಸ್ಟಿ ಡಾ.ಪ್ರಭಾ ಮಲ್ಲಿಕಾರ್ಜುನ್ ಹೇಳಿದರು.
 ಆರ್.ಎಲ್. ಕಾನೂನು ಕಾಲೇಜು ಎನ್.ಎಸ್.ಎಸ್. ಘಟಕ ಹಾಗೂ ಎಸ್.ಎಸ್.ಕೇರ್ ಟ್ರಸ್ಟ್ ಸಹಯೋಗದಲ್ಲಿ ಆರ್.ಎಲ್. ಕಾನೂನು ಕಾಲೇಜಿನಲ್ಲಿ ಗುರುವಾರ ಹಮ್ಮಿಕೊಂಡಿದ್ದ ರಕ್ತದಾನ ಶಿಬಿರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
 ಯುವಕರು ರಕ್ತದಾನ ಹಾಗೂ ಸಸಿ ನೆಡುವಂತಹ ಸಾಮಾಜಿಕ ಕಾರ್ಯಗಳಲ್ಲಿ ತೊಡಗಬೇಕು. ಮೊಬೈಲ್ ಗೀಳಿನಿಂದ ಹೊರಬರಬೇಕು. ಉತ್ತಮ ಸಂದೇಶ ಮಾತ್ರ ಸ್ವೀಕರಿಸಬೇಕು ಎಂದು ತಿಳಿಸಿದರು.
 ಬಾಪೂಜಿ ವಿದ್ಯಾಸಂಸ್ಥೆ ಶೈಕ್ಷಣಿಕ ನಿರ್ದೇಶಕ ಡಾ. ಎಂ.ಜಿ. ಈಶ್ವರಪ್ಪ ಮಾತನಾಡಿ, ಆರೋಗ್ಯವಂತ ಯುವಜನರು ಅಗತ್ಯ ಸಂದರ್ಭದಲ್ಲಿ ರೋಗಿಗಳಿಗೆ ರಕ್ತದಾನ ಮಾಡಬೇಕು ಎಂದರು.
 ಬಾಪೂಜಿ ಆಸ್ಪತ್ರೆ ವೈದ್ಯಕೀಯ ನಿರ್ದೇಶಕ ಡಾ. ಕುಮಾರ್ ಮಾತನಾಡಿ, ರಕ್ತದಾನದಿಂದ ಆರೋಗ್ಯಯುತ ಜೀವನ ನಡೆಸಬಹುದು ಎಂದು ತಿಳಿಸಿದರು.
 50ಕ್ಕೂ ಹೆಚ್ಚು ಯುವಕ-ಯುವತಿಯರು ರಕ್ತದಾನ ಮಾಡಿದರು. ಬಾಪೂಜಿ ಆಸ್ಪತ್ರೆಯ ಬ್ಲಡ್ ಬ್ಯಾಂಕ್ ಸಿಬ್ಬಂದಿ ಶಿಬಿರ ನಡೆಸಿಕೊಟ್ಟರು. ರಕ್ತದಾನ ಮಾಡಿದವರಿಗೆ ಪ್ರಮಾಣಪತ್ರ ವಿತರಿಸಲಾಯಿತು.
 ಕಾಲೇಜಿನ ಪ್ರಾಚಾರ್ಯ ಡಾ.ಜಿ.ಎಸ್. ಯತೀಶ್ ಅಧ್ಯಕ್ಷತೆ ವಹಿಸಿದ್ದರು. ಡಾ. ಜಗದೀಶ್ವರಿ, ಡಾ. ಧನ್ಯಕುಮಾರ್ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net