

ದಾವಣಗೆರೆ : ಜಗಳೂರಿನ ಜೆ.ಎಂ. ಇಮಾಂ ಟ್ರಸ್ಟ್, ಜೆ.ಎಂ. ಇಮಾಂ ಸ್ಮಾರಕ ಶಾಲೆ ವತಿಯಿಂದ ‘ಮಾನವತೆಯ ಬೆಳಕು’ ಪುಸ್ತಕ ಬಿಡುಗಡೆ ಸಮಾರಂಭ ಗುರುವಾರ ಬೆಳಗ್ಗೆ 11ಕ್ಕೆ ನಗರದ ಕುವೆಂಪು ಕನ್ನಡ ಭವನದಲ್ಲಿ ಆಯೋಜಿಸಲಾಗಿದೆ ಎಂದು ಪುಸ್ತಕ ಸಂಪಾದನಾ ಸಮಿತಿಯ ಪ್ರಧಾನ ಸಂಪಾದಕ, ಸಾಹಿತಿ ಎನ್.ಟಿ. ಎರ‌್ರಿಸ್ವಾಮಿ ಹೇಳಿದರು. ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕಾರ್ಯಕ್ರಮದ ಉದ್ಘಾಟನೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಮಾಡುವರು. ವಿಧಾನ ಸಭಾಧ್ಯಕ್ಷ ಯು.ಟಿ. ಖಾದರ್ ಕೃತಿಯ ಲೋಕಾರ್ಪಣೆ ಮಾಡುವರು. ಶಾಸಕ ಡಾ. ಶಾಮನೂರು ಶಿವಶಂಕರಪ್ಪ ಪುಸ್ತಕದ ಪ್ರಥಮ ಪ್ರತಿ ಹಸ್ತಾಂತರ ಮಾಡುವರು. ಕೃತಿ ಕುರಿತು ಕುವೆಂಪು ವಿಶ್ವವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕ ಡಾ. ರಾಜೇಂದ್ರ ಚೆನ್ನಿ ಮಾತನಾಡುವರು. ಜೆ.ಎಂ. ಇಮಾಂ ಟ್ರಸ್ಟ್ ಗೌರವಾಧ್ಯಕ್ಷ ಕೆ. ಹುಸೇನ್ ಮಿಯಾ ಸಾಬ್ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ತಿಳಿಸಿದರು. ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್, ಜಗಳೂರು ಶಾಸಕ ಬಿ. ದೇವೇಂದ್ರಪ್ಪ, ಮಾಯಕೊಂಡ ಶಾಸಕ ಕೆ.ಎಸ್. ಬಸವಂತಪ್ಪ, ವಿಧಾನ ಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್, ಚಿತ್ರದುರ್ಗದ ರಾಜ್ಯ ಪಿಂಜಾರ್/ನದಾಫ್ ಸಂಘದ ಅಧ್ಯಕ್ಷ ಜಲೀಲ್ ಸಾಬ್, ಉದ್ಯಮಿ ಎಚ್.ಇ. ದಾದಾ ಖಲಂದರ್ ಪಾಲ್ಗೊಳ್ಳುವರು ಎಂದು ಮಾಹಿತಿ ನೀಡಿದರು. ಡಾ.ದಾದಾಪೀರ್ ನವಿಲೇಹಾಳು, ಎಸ್. ಹಾಲಪ್ಪ, ಆರ್. ಖಾಸಿಂಸಾಬ್ ಸುದ್ದಿಗೋಷ್ಠಿಯಲ್ಲಿದ್ದರು.