ಆಕಾಶಕ್ಕೆ ಏಣಿ’ ಕೃತಿ ಲೋಕಾರ್ಪಣೆ

IMG-20230915-WA0069.jpg
Published on

ದಾವಣಗೆರೆ : ಜಿಲ್ಲಾ ಸಮಾಚಾರ ಪತ್ರಿಕಾ ಬಳಗದಿಂದ ಹಿರಿಯ ಪತ್ರಕರ್ತ ವಿ. ಹನುಮಂತಪ್ಪ ರಚಿಸಿರುವ ‘ಆಕಾಶಕ್ಕೆ ಏಣಿ’ ವಿಶಿಷ್ಟ ಲೇಖನಗಳ ಸಂಗ್ರಹ ಕೃತಿ ಲೋಕಾರ್ಪಣೆ ಕಾರ್ಯಕ್ರಮವನ್ನು ಸೆ. 17ರಂದು ಬೆಳಗ್ಗೆ 11 ಗಂಟೆಗೆ ನಗರದ ರೋಟರಿ ಬಾಲಭವನದಲ್ಲಿ ಆಯೋಜಿಸಲಾಗಿದೆ ಎಂದು ಬಳಗದ ಸಂಘಟನಾ ಕಾರ್ಯದರ್ಶಿ ಸಾಲಿಗ್ರಾಮ ಗಣೇಶ ಶೆಣೈ ಹೇಳಿದರು.
 ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಪತ್ರಕರ್ತ ರವೀಂದ್ರ ಭಟ್ಟ ಐನಕೈ ಅವರು ಕೃತಿ ಲೋಕಾರ್ಪಣೆ ಮಾಡಲಿದ್ದಾರೆ ಎಂದು ತಿಳಿಸಿದರು.
 ಹಿರಿಯ ವಕೀಲ ರಾಮಚಂದ್ರ ಕಲಾಲ್, ಗ್ರಂಥಾಲಯ ಇಲಾಖೆ ಉಪ ನಿರ್ದೇಶಕ ಪಿ.ಆರ್. ತಿಪ್ಪೇಸ್ವಾಮಿ, ಅನ್‌ಮೋಲ್ ವಿದ್ಯಾಸಂಸ್ಥೆ ಸಂಸ್ಥಾಪಕ ಸಿ.ಜಿ. ದಿನೇಶ್, ಲೇಖಕಿ ಸತ್ಯಭಾಮಾ ಮಂಜುನಾಥ್ ಪಾಲ್ಗೊಳ್ಳುವರು. ಅಂದು ಬೆಳಗ್ಗೆ 9 ರಿಂದ ಗಾಯನ, ಸಮೂಹ ಗೀತೆ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗಿದೆ ಎಂದರು. ಜಯಪ್ರಕಾಶ್, ಪಾಪುಗುರು, ಭಾರತಿ, ಎನ್.ಕೆ. ಕೊಟ್ರೇಶ್ ಸುದ್ದಿಗೋಷ್ಠಿಯಲ್ಲಿದ್ದರು.
 ...
 
 

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net