

ದಾವಣಗೆರೆ : ನಗರದಲ್ಲಿ ನೂತನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣಕ್ಕೆ ಮಾಜಿ ಶಾಸಕ ಪಂಪಾಪತಿ ಅವರ ಹೆಸರು ನಾಮಕರಣ ಮಾಡುವಂತೆ ಒತ್ತಾಯಿಸಿ ಎಐಟಿಯುಸಿ ಮುಖಂಡರು ಶುಕ್ರವಾರ ಪತ್ರ ಚಳವಳಿ ನಡೆಸಿದರು.
ಚಳವಳಿ ಆರಂಭಿಸಿ ನಗರದ ಬಿಜೆಪಿ ಕಚೇರಿಗೆ ತೆರಳಿದ ಎಐಟಿಯುಸಿ ಮುಖಂಡರು ಹೋರಾಟಕ್ಕೆ ಬೆಂಬಲಿಸುವಂತೆ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಶ್ರೀನಿವಾಸ ದಾಸಕರಿಯಪ್ಪ ಹಾಗೂ ಪ್ರಧಾನ ಕಾರ್ಯದರ್ಶಿ ಬಿ.ಎಸ್.ಜಗದೀಶ್ ಅವರಿಗೆ ಮನವಿ ಸಲ್ಲಿಸಿದರು.
ನಗರಸಭೆ ಅಧ್ಯಕ್ಷರು ಹಾಗೂ ಮೂರು ಬಾರಿ ಶಾಸಕರಾಗಿ ಬಡಜನರು ಹಾಗೂ ಕಾರ್ಮಿಕರ ಹಿತಕ್ಕಾಗಿ ಅನೇಕ ಸಮಾಜಮುಖಿ ಕಾರ್ಯಗಳನ್ನು ಕೈಗೊಂಡ ಪಂಪಾಪತಿ ಅವರು ನಗರದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಿದ್ದು, ಕೆಎಸ್‌ಆರ್‌ಟಿಸಿ ಬಸ್‌ನಿಲ್ದಾಣಕ್ಕೆ ಅವರ ಹೆಸರನ್ನಿಡಬೇಕು ಎಂದು ಆಗ್ರಹಿಸಿ ಚಳವಳಿ ನಡೆಸಲಾಗುತ್ತಿದೆ ಎಂದು ತಿಳಿಸಿದರು.
ಜಿಲ್ಲಾಧ್ಯಕ್ಷ ರಾಘವೇಂದ್ರ ನಾಯರಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಆವರಗೆರೆ ಎಚ್.ಜಿ. ಉಮೇಶ್, ಪಿ.ಕೆ. ಲಿಂಗರಾಜ, ಭಜನೆ ಹನುಮಂತಪ್ಪ, ಭೀಮಾರೆಡ್ಡಿ, ಶಿವಕುಮಾರ್ ಡಿ. ಶೆಟ್ಟರ್, ವಿ. ಲಕ್ಮಣ್, ಡಿ.ಷಣ್ಮುಗಂ, ಸುರೇಶ್ ಯರಗುಂಟೆ, ಎಸ್. ಮುರುಗೇಶ್ ಇತರರು ಇದ್ದರು.