ಗುಂಡಿಗೆ ಬಿದ್ದ ಕಾರು

DVG CAR JULY 12
Published on

ದಾವಣಗೆರೆ: ನಗರದ ಎಸ್ಸೆಸ್ ಆಸ್ಪತ್ರೆ ಸಮೀಪದ ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ ಚಲಿಸುತ್ತಿದ್ದ ಕಾರೊಂದು ಕಾಮಗಾರಿ ನಡೆಸಲಾಗುತ್ತಿದ್ದ ಗುಂಡಿಗೆ ಬಿದ್ದು ಜಖಂಗೊಂಡಿದೆ. ಕಾರಿನಲ್ಲಿದ್ದ ಪ್ರಯಾಣಿಕರಿಬ್ಬರು ಗಾಯಗೊಂಡಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಬೆಂಗಳೂರಿನಿಂದ ದಾವಣಗೆರೆಗೆ ಬರುತ್ತಿದ್ದ ವೇಳೆ ಎದುರಿಗೆ ಬಂದ ಕುದುರೆ ಉಳಿಸಲೆಂದು ವಾಹನ ತಿರುಗಿಸಿದಾಗ ಅಪಘಾತ ಸಂಭವಿಸಿದೆ. ಈ ಬಗ್ಗೆ ದಾವಣಗೆರೆ ದಕ್ಷಿಣ ಸಂಚಾರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net