

ದಾವಣಗೆರೆ : ನಗರದ ಹೊರ ವಲಯದ ರಾಷ್ಟ್ರೀಯ ಹೆದ್ದಾರಿಯಲ್ಲಿ ಬುಧವಾರ ರಾತ್ರಿ ಚಲಿಸುತ್ತಿದ್ದ ಕಾರೊಂದು ಹೊತ್ತಿ ಉರಿದಿದ್ದು, ಅದರಲ್ಲಿದ್ದ ಐವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕುಂದುವಾಡದ ಸಮೀಪ ಬಂದಾಗ ಕಾರಿನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದೆ. ಅದನ್ನು ಗಮನಿಸಿದ ಚಾಲಕ ಕೂಡಲೇ ರಸ್ತೆ ಬದಿಯಲ್ಲಿ ಕಾರು ನಿಲ್ಲಿಸಿದ್ದಾರೆ. ಆದರೆ ಬೆಂಕಿ ಸಂಪೂರ್ಣ ಆವರಿಸಿ, ಕಾರು ಸುಟ್ಟು ಕರಕಲಾಗಿದೆ. ಕಾರು ಮದ್ದೂರಿನಿಂದ ಹುಬ್ಬಳ್ಳಿ ಕಡೆಗೆ ಹೋಗುತ್ತಿತ್ತು ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಟ್ರಾಫಿಕ್ ಇನ್‌ಸ್ಪೆಕ್ಟರ್ ನಲವಾಗಲು ಮಂಜುನಾಥ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.