ಏಕಕಾಲಕ್ಕೆ ಟ್ರ್ಯಾಕ್ಟರ್​, ಲಾರಿಗೆ ಕಾರು ಡಿಕ್ಕಿ: ಯುವಕರಿಬ್ಬರ ದುರಂತ ಸಾವು, ಮದ್ವೆ ಮುಗಿಸಿ ಬರುವಾಗ ದುರ್ಘಟನೆ

Car
Published on

ದಾವಣಗೆರೆ: ಏಕಕಾಲಕ್ಕೆ ಟ್ರ್ಯಾಕ್ಟರ್​ ಮತ್ತು ಲಾರಿಗೆ ಕಾರು ಡಿಕ್ಕಿಯಾಗಿ ಯುವಕರಿಬ್ಬರು ದುರಂತ ಸಾವಿಗೀಡಾಗಿರುವ ಘಟನೆ ದಾವಣಗೆರೆ ತಾಲೂಕಿನ ರಾಮಗೊಂಡನಹಳ್ಳಿ ಬಳಿ ಬುಧವಾರ (ಫೆ.8) ತಡರಾತ್ರಿ ನಡೆದಿದೆ.

ಬಿಲ್ಲಹಳ್ಳಿ ಮಂಜುನಾಥ (24) ಹಾಗೂ ಪಾಂಡೊಮಟ್ಟಿ ಅಮೃತ್ (23) ಮೃತಪಟ್ಟ ಯುವಕರು. ಘಟನೆಯಲ್ಲಿ ಓರ್ವ ಯುವಕನ ಸ್ಥಿತಿ ಗಂಭೀರವಾಗಿದ್ದು, ದಾವಣಗೆರೆಯ ಎಸ್​ಎಸ್​ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ.

ದಾವಣಗೆರೆಯಲ್ಲಿ ನಿಗದಿಯಾಗಿದ್ದ ಮದುವೆ ಕಾರ್ಯಕ್ರಮವನ್ನು ಮುಗಿಸಿಕೊಂಡು ಸ್ವಗ್ರಾಮ ಚನ್ನಗಿರಿ ತಾಲೂಕಿನ ಪಾಂಡೊಮಟ್ಟಿಗೆ ಯುವಕರು ಕಾರಿನಲ್ಲಿ ಹಿಂತಿರುಗುತ್ತಿದ್ದರು. ತಡರಾತ್ರಿ ಚಾಲಕನ ನಿಯಂತ್ರಣ ಕಳೆದುಕೊಂಡ ಕಾರು ಎದುರಿಗೆ ಬರುತ್ತಿದ್ದ ಟ್ರ್ಯಾಕ್ಟರ್​ಗೆ ಡಿಕ್ಕಿ ಹೊಡೆದ ಬಳಿಕ ಲಾರಿಗೆ ಗುದ್ದಿದೆ.

ಡಿಕ್ಕಿಯ ರಭಸಕ್ಕೆ ಯುವಕರಿಬ್ಬರು ಸ್ಥಳದಲ್ಲೇ ಮೃತಪಟ್ಟರೆ, ಓರ್ವನಿಗೆ ಗಂಭೀರ ಗಾಯವಾಗಿದೆ. ಟ್ರ್ಯಾಕ್ಟರ್​ನಲ್ಲಿದ್ದವರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಮಾಯಕೊಂಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. (ದಿಗ್ವಿಜಯ ನ್ಯೂಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net