ಸುಪ್ರೀಂ ಕೋರ್ಟ್ ತೀರ್ಪು ಸ್ವಾಗತಿಸಿ ಸಂಭ್ರಮ

dvg-sambhrama-1.jpg
Published on

ದಾವಣಗೆರೆ : ಒಳ ಮೀಸಲಾತಿ ಪರವಾಗಿ ಸುಪ್ರೀಂ ಕೋರ್ಟ್ ನೀಡಿದ ತೀರ್ಪನ್ನು ಸ್ವಾಗತಿಸಿ ದಲಿತ ಸಂಘರ್ಷ ಸಮಿತಿಯ ಮುಖಂಡರು ನಗರದಲ್ಲಿ ಗುರುವಾರ ಸಂಭ್ರಮಾಚರಣೆ ಮಾಡಿದರು.  ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಸಿಹಿ ಹಂಚುವ ಮೂಲಕ ಸಂತಸ ವ್ಯಕ್ತಪಡಿಸಿದರು. ಸುಪ್ರೀಂ ಕೋರ್ಟ್ ತೀರ್ಪು ಸಾಮಾಜಿಕ ನ್ಯಾಯವನ್ನು ಎತ್ತಿ ಹಿಡಿಯುವಂತಿದ್ದು ನಮ್ಮ ಸಂಘಟನೆ ಸ್ವಾಗತಿಸುತ್ತದೆ ಎಂದು ಹೇಳಿದರು.  ಒಳಮಿಸಲಾತಿ ಪರವಾಗಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯಿಂದ ಎರಡು ದಶಕಗಳ ಕಾಲ ಸತತವಾಗಿ ಹೋರಾಟಗಳನ್ನು ಮಾಡಿದ್ದೇವೆ. ರಾಜ್ಯಮಟ್ಟದ ರ‌್ಯಾಲಿ, ಪಾದಯಾತ್ರೆ, ಜಿಲ್ಲೆ, ತಾಲೂಕು ಮಟ್ಟದಲ್ಲಿ ಕಾರ್ಯಕ್ರಮಗಳನ್ನು ಮಾಡಿದ್ದು ಈಗ ವಿಜಯ ಪ್ರಾಪ್ತಿಯಾದಂತಾಗಿದೆ ಎಂದು ತಿಳಿಸಿದರು. ಈಗ ರಾಜ್ಯಸರ್ಕಾರ ಒಳಮೀಸಲಾತಿ ಕಲ್ಪಿಸಲು ಮರುಮಾತಿಲ್ಲದೆ ಮುಂದಾಗಬೇಕಿದೆ ಎಂದು ಹೇಳಿದರು.  ದಲಿತ ಸಂಘರ್ಷ ಸಮಿತಿ ರಾಜ್ಯ ಸಂಘಟನಾ ಸಂಚಾಲಕ ಹೆಗ್ಗೆರೆ ರಂಗಪ್ಪ, ಕರ್ನಾಟಕ ದಲಿತ ವಿದ್ಯಾರ್ಥಿ ಒಕ್ಕೂಟದ ಸಂಚಾಲಕ ಹುಚ್ಚೆಂಗಿ ಪ್ರಸಾದ್, ಮುಖಂಡರಾದ ಹೂವಿನಮಡು ಅಂಜಿನಪ್ಪ, ಗುಮ್ಮನೂರು ರಾಮಚಂದ್ರಪ್ಪ, ಬಾಬು, ನಿಂಗರಾಜು, ಗುಮ್ಮನೂರು ಬಸವರಾಜ್, ನಾಗನೂರು ರಾಜು, ಮುದಹದಡಿ ಮೈಲಪ್ಪ, ಚಿಕ್ಕನಹಳ್ಳಿ ಹನುಮಂತಪ್ಪ, ಬೀರೂರು ಹನುಮಂತಪ್ಪ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net