ಕೇಂದ್ರದ ಜಾತಿಗಣತಿಗೆ ನಮ್ಮ ತಕರಾರಿಲ್ಲ

dvg-guard-of-honour.jpg
Published on

ದಾವಣಗೆರೆ : ಕೇಂದ್ರ ಸರ್ಕಾರದ ಜಾತಿಗಣತಿಗೆ ನಮ್ಮದೇನೂ ತಕರಾರಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.  ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿ, ಕೇಂದ್ರದವರು ಮಾಡುವುದು ಜಾತಿಗಣತಿ ಮಾತ್ರ. ಆದರೆ ನಾವು ಸಾಮಾಜಿಕ, ಶೈಕ್ಷಣಿಕ ಸ್ಥಿತಿಯ ಸಮೀಕ್ಷೆಯ ಜತೆಗೆ ಜಾತಿಗಣತಿ ಮಾಡುತ್ತಿದ್ದೇವೆ. ಸಾಮಾಜಿಕ ನ್ಯಾಯ ಕೊಡಬೇಕಾದರೆ ಸಾಮಾಜಿಕ, ಶೈಕ್ಷಣಿಕ ಸ್ಥಿತಿಯನ್ನು ತಿಳಿಯಬೇಕಾಗುತ್ತದೆ ಎಂದರು.  ವರದಿಯ ಕುರಿತು ಪ್ರಬಲರು ಹಾಗೂ ದುರ್ಬಲರು ಆಕ್ಷೇಪಣೆ  ವ್ಯಕ್ತಪಡಿಸಿದ್ದಾರೆ. ಎಲ್ಲಕ್ಕಿಂತ ಮುಖ್ಯವಾಗಿ ಹಿಂದುಳಿದ ವರ್ಗಗಳ ಕಾಯ್ದೆಯ  ಸೆಕ್ಷನ್ 11(1)ರ ಪ್ರಕಾರ ವರದಿಗೆ ಹತ್ತು ವರ್ಷಗಳಾದ ಮೇಲೆ ಮರು ಸಮೀಕ್ಷೆಯಾಗಬೇಕು ಎಂದು ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net