ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಸಿಇಟಿ

kcet.jpg
Published on

ದಾವಣಗೆರೆ : ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ 2024ನೇ ಸಾಲಿನ ಇಂಜಿನಿಯರಿಂಗ್, ಕೃಷಿ ವಿಜ್ಞಾನ, ಪಶು ಸಂಗೋಪನೆ, ಫಾರ್ಮಸಿ, ಬಿ.ಎಸ್ಸಿ ನರ್ಸಿಂಗ್ ಸೇರಿ ವಿವಿಧ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಗುರುವಾರ ಮತ್ತು ಶುಕ್ರವಾರ ನಗರದ 23 ಕೇಂದ್ರಗಳಲ್ಲಿ ಸಿಇಟಿ ಪರೀಕ್ಷೆ ನಡೆಯಲಿದೆ ಎಂದು ಅಪರ ಜಿಲ್ಲಾಧಿಕಾರಿ ಸೈಯ್ಯದ್ ಆಫ್ರೀನ್ ಭಾನು ಎಸ್.ಬಳ್ಳಾರಿ ತಿಳಿಸಿದರು.
 ಜಿಲ್ಲಾಡಳಿತ ಭವನದ ತುಂಗಭದ್ರಾ ಸಭಾಂಗಣದಲ್ಲಿ ಮಂಗಳವಾರ ಪರೀಕ್ಷಾ ಪೂರ್ವಭಾವಿ ಸಿದ್ಧತಾ ಸಭೆಯಲ್ಲಿ ಮಾತನಾಡಿದರು.
 ಗುರುವಾರ ಬೆಳಗ್ಗೆ 10.30 ರಿಂದ 11.50 ರ ವರೆಗೆ 60 ಅಂಕಗಳಿಗೆ ಜೀವಶಾಸ್ತ್ರ, ಮಧ್ಯಾಹ್ನ 2.30 ರಿಂದ 3.50 ರವರೆಗೆ 60 ಅಂಕಗಳಿಗೆ ಗಣಿತ ಪರೀಕ್ಷೆ ನಡೆಯಲಿದೆ. ಶುಕ್ರವಾರ ಬೆಳಗ್ಗೆ 10.30 ರಿಂದ 11.50 ರ ವರೆಗೆ 60 ಅಂಕಗಳಿಗೆ ಭೌತಶಾಸ್ತ್ರ, ಮಧ್ಯಾಹ್ನ 2.30 ರಿಂದ 3.50 ರ ವರೆಗೆ 60 ಅಂಕಗಳಿಗೆ ರಾಸಾಯನಶಾಸ್ತ್ರ ವಿಷಯದ ಪರೀಕ್ಷೆ ನಡೆಯಲಿವೆ.
 ಪರೀಕ್ಷೆ ನಡೆಯುವ ಕೇಂದ್ರಗಳಲ್ಲಿ ವಿದ್ಯಾರ್ಥಿಗಳಿಗೆ ಆಸನ, ಗಾಳಿ, ಬೆಳಕಿನ ವ್ಯವಸ್ಥೆಯನ್ನು ಸರಿಯಾಗಿರುವಂತೆ ನೋಡಿಕೊಳ್ಳಬೇಕು. ಕುಡಿಯಲು ಶುದ್ಧ ನೀರು ಇಡಬೇಕು. ವಿದ್ಯಾರ್ಥಿ ಹೊರಗೆ ಬಂದು ನೀರು ಕುಡಿದು ಹೋಗಲು ಅವಕಾಶ ಮಾಡಿಕೊಡಬೇಕು ಎಂದು ಸೂಚಿಸಿದರು.
 ಪರೀಕ್ಷಾ ಕೇಂದ್ರಗಳ ಸುತ್ತಮುತ್ತ 144ನೇ ಸೆಕ್ಷನ್ ಪ್ರಕಾರ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದು ತಿಳಿಸಿದರು.
 ಶಾಲಾ ಶಿಕ್ಷಣ ಇಲಾಖೆ ಪದವಿಪೂರ್ವ ಉಪನಿರ್ದೇಶಕ ಕರಿಸಿದ್ದಪ್ಪ ಇದ್ದರು.
 ...

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net