ಮಕ್ಕಳ ಗ್ರಾಮ ಸಭೆ ಜಾರಿಗೆ ಬೇಡ ನಿರ್ಲಕ್ಷೃ

IMG-20231111-WA0079.jpg
Published on

ದಾವಣಗೆರೆ : ಪೌರಪ್ರಜ್ಞೆ ಮೂಡಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಹಮ್ಮಿಕೊಂಡಿರುವ ಮಕ್ಕಳ ಸ್ನೇಹಿ ಅಭಿಯಾನ ಹಾಗೂ ಮಕ್ಕಳ ಗ್ರಾಮ ಸಭೆಯನ್ನು ಯಶಸ್ವಿಯಗಿ ಜಾರಿಗೊಳಿಸಬೇಕು ಎಂದು ಬಂಧುತ್ವ ಫೌಂಡೇಷನ್ ಅಧ್ಯಕ್ಷ ರಾಘು ದೊಡ್ಡಮನಿ ಆಗ್ರಹಿಸಿದ್ದಾರೆ.
 ನ. 14 ರಿಂದ ಜ. 24 ರ ವರೆಗೆ 10 ವಾರಗಳ ಕಾಲ ಈ ಅಭಿಯಾನ ಹಾಗೂ ಮಕ್ಕಳ ಗ್ರಾಮ ಸಭೆ ನಡೆಸಲು ರಾಜ್ಯದ ಎಲ್ಲ ಗ್ರಾಮ ಪಂಚಾಯಿತಿಗಳಿಗೂ ಸೂಚನೆ ನೀಡಲಾಗಿದೆ. ಗ್ರಾ.ಪಂ.ಗಳನ್ನು ಮಕ್ಕಳ ಸ್ನೇಹಿಯಾಗಿಸಲು ಇದು ಮಹತ್ವದ ಹೆಜ್ಜೆಯಾಗಿದೆ ಎಂದು ತಿಳಿಸಿದ್ದಾರೆ.
 ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಮಕ್ಕಳಿಗೆ ಸಂಬಂಧಿಸಿದ ಅನೇಕ ಸಮಸ್ಯೆಗಳು ಮಕ್ಕಳ ಆರೋಗ್ಯ, ರಕ್ಷಣೆ, ಅಂಗನವಾಡಿಗಳು, ಶಾಲೆ, ಶಾಲಾ ಆವರಣ, ಸ್ವಚ್ಛತೆ, ಬಡ ಮಕ್ಕಳಿಗೆ ನೆರವು ಮುಂತಾದ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಯಬೇಕು. ಗ್ರಾ.ಪಂ. ಅಧ್ಯಕ್ಷರು, ಸದಸ್ಯರು, ಅಧಿಕಾರಿಗಳು ಸಭೆಯಲ್ಲಿ ಖುದ್ದು ಹಾಜರಿರಬೇಕು. ಮಕ್ಕಳ ಸಭೆ ಎಂದು ಯಾರೂ ನಿರ್ಲಕ್ಷ್ಯ ತೋರಬಾರದು. ಸಾಮಾನ್ಯ ಗ್ರಾಮ ಸಭೆಗಳಿಗಿರುವಷ್ಟು ಪ್ರಾಮುಖ್ಯತೆ ಈ ಮಕ್ಕಳ ಸಭೆಗೂ ಇರುತ್ತದೆ ಎಂದಿದ್ದಾರೆ.
 ಸರ್ಕಾರದ ಈ ಕಾರ್ಯಕ್ರಮ ಯಶಸ್ವಿಯಾಗಬೇಕೆಂಬುದು ನಮ್ಮ ಆಶಯ. ಜಿಲ್ಲೆಯ ಮಕ್ಕಳ ಶಿಕ್ಷಣ, ರಕ್ಷಣೆ ಹಾಗೂ ಅವರ ಹಕ್ಕು ಬಾಧ್ಯತೆಗಳಿಗಾಗಿ ಇಲಾಖೆಯ ಜತೆಗೆ ಕೆಲಸ ಮಾಡಲು ಬಂಧುತ್ವ ಫೌಂಡೇಷನ್ ಸಿದ್ಧವಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net