ಜೈನ್ ಕಾಲೇಜಿನಲ್ಲಿ ‘ಶೃಂಗ’ ಕಾರ್ಯಕ್ರಮಕ್ಕೆ ಚಾಲನೆ

dvg-jain-06-new.jpg
Published on

ದಾವಣಗೆರೆ : ನಗರದ ಜೈನ್ ತಾಂತ್ರಿಕ ಮಹಾವಿದ್ಯಾಲಯದಲ್ಲಿ ವಾರ್ಷಿಕ ಕ್ರೀಡೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ‘ಶೃಂಗ’ ಕ್ಕೆ ಸೋಮವಾರ ಸಂಭ್ರಮದ ಚಾಲನೆ ದೊರೆಯಿತು.
 ಯುವ ನಟ ಪೃಥ್ವಿ ಶಾಮನೂರು ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಪ್ರಜಾಪ್ರಭುತ್ವದಲ್ಲಿ ಮತ ಚಲಾವಣೆ ನಮ್ಮ ಹಕ್ಕು ಹಾಗೂ ಕರ್ತವ್ಯ. ಯುವ ಸಮೂಹವು ಜನ ಪ್ರತಿನಿಧಿಗಳನ್ನು ಚುನಾಯಿಸುವಲ್ಲಿ ಕಡ್ಡಾಯವಾಗಿ ಪಾಲ್ಗೊಳ್ಳಬೇಕು ಎಂದು ತಿಳಿಸಿದರು.
 ಸಲಹೆಗಾರ ಡಾ. ಮಂಜಪ್ಪ ಸಾರಥಿ ಹಾಗೂ ಪ್ರಾಚಾರ್ಯ ಡಾ.ಡಿ.ಬಿ. ಗಣೇಶ್ ಮಾತನಾಡಿ ವಿದ್ಯಾರ್ಥಿಗಳು ಸ್ಪರ್ಧಾ ಮನೋಭಾವನೆಯಿಂದ ಪಾಲ್ಗೊಳ್ಳುವಂತೆ ಹೇಳಿದರು.
 ಸಮಾರಂಭದ ಸಂಚಾಲಕ ಡಾ.ಎಸ್. ಮೌನೇಶಚಾರ್ ಕ್ರೀಡೆ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳ ಜಾಲತಾಣದ ಬಗ್ಗೆ ವಿವರಣೆ ನೀಡಿದರು. ಕಾಲೇಜಿನ ಸಾಂಸ್ಕೃತಿಕ ಸಂಯೋಜಕ ಎಸ್. ಮುರಳೀಧರ್ ಪ್ರಾರ್ಥಿಸಿದರು.
 

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net