ಸಾಮಾಜಿಕ ಜಾಲತಾಣಗಳ ಬಗ್ಗೆ ಇರಲಿ ಎಚ್ಚರ

gm_20240616002703979.jpg
Published on

ದಾವಣಗೆರೆ : ವಿದ್ಯಾರ್ಥಿಗಳು ಸಾಮಾಜಿಕ ಜಾಲತಾಣಗಳನ್ನು ಅಥವಾ ಮಾಧ್ಯಮಗಳನ್ನು ಬಳಸುವಾಗ ಬಹಳ ಎಚ್ಚರಿಕೆಯಿಂದ ಇರಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ಕಿವಿಮಾತು ಹೇಳಿದರು.
 ನಗರದ ಜಿ.ಎಂ. ತಾಂತ್ರಿಕ ಮಹಾವಿದ್ಯಾಲಯದ ಎಲೆಕ್ಟ್ರಿಕಲ್ ಆ್ಯಂಡ್ ಎಲೆಕ್ಟ್ರಾನಿಕ್ಸೃ್ ಇಂಜಿನಿಯರಿಂಗ್ ವಿಭಾಗದಿಂದ ಶನಿವಾರ ಆಯೋಜಿಸಿದ್ದ ಯುವ ಸಬಲೀಕರಣ ಕುರಿತ ವಿಚಾರ ಸಂಕಿರಣ ಉದ್ಘಾಟಿಸಿ ಮಾತನಾಡಿದರು.
 ವಿದ್ಯಾರ್ಥಿಗಳು ಯಾವುದೆ ಅಹಿತಕರ ಘಟನೆಗಳಲ್ಲಿ ಪಾಲ್ಗೊಳ್ಳದೆ, ತಮ್ಮ ಭವಿಷ್ಯವನ್ನು ಉಜ್ವಲವಾಗಿ ರೂಪಿಸಿಕೊಳ್ಳಬೇಕು ಎಂದು ತಿಳಿಸಿದರು.
 ಡಾ. ಸುಭಾಷ್ ಚಂದ್ರನ್ ಅವರು ‘ವಿದ್ಯಾರ್ಥಿಗಳಿಗೆ ಯುವ ಸಬಲೀಕರಣ ಮತ್ತು ಜಾಗರೂಕ ನಾಗರಿಕ’ ಎಂಬ ವಿಷಯದ ಬಗ್ಗೆ ವಿಚಾರ ಸಂಕಿರಣ ನಡೆಸಿಕೊಟ್ಟರು.
 ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಚಾರ್ಯ ಎಂ.ಬಿ. ಸಂಜಯ್ ಪಾಂಡೆ ಮಾತನಾಡಿದರು. ತರಬೇತಿ ಮತ್ತು ಉದ್ಯೋಗ ವಿಭಾಗದ ನಿರ್ದೇಶಕ ಪ್ರೊ. ಟಿ.ಆರ್. ತೇಜಸ್ವಿ ಕಟ್ಟಿಮನಿ, ಕಾರ್ಯಕ್ರಮದ ಸಂಯೋಜಕರಾದ ಪ್ರೊ.ಎ.ಬಿ. ಯಶಸ್ವಿನಿ ಪಟೇಲ್, ಪ್ರೊ.ಜಿ.ಆರ್. ಕಾವ್ಯಾ, ವಿಭಾಗದ ಅಧ್ಯಾಪಕರು, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥೆ ಡಾ. ಯು.ಎಂ. ನೇತ್ರಾವತಿ ಸ್ವಾಗತಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net