

ದಾವಣಗೆರೆ : ಭವಿಷ್ಯದ ಕನಸುಗಳನ್ನು ಸಾಕಾರಗೊಳಿಸಿಕೊಳ್ಳಲು ಸ್ವಾಮಿ ವಿವೇಕಾನಂದರ ವಿಚಾರಗಳು ಪ್ರೇರಣೆ ನೀಡುತ್ತವೆ ಎಂದು ರಾಮಕೃಷ್ಣ ಆಶ್ರಮದ ಸ್ವಾಮಿ ತೀರ್ಥಕರಾನಂದಜಿ ಮಹಾರಾಜ ಹೇಳಿದರು.
ನಗರದ ಜಿ.ಎಂ. ಹಾಲಮ್ಮ ಪಿಯು ಕಾಲೇಜಿನಲ್ಲಿ ರಾಮಕೃಷ್ಣ ಮಿಷನ್ ವತಿಯಿಂದ ಇತ್ತೀಚೆಗೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸ್ವಾಮಿ ವಿವೇಕಾನಂದರ ಪ್ರಕಾರ ಶಿಕ್ಷಣ ಮತ್ತು ವ್ಯಕ್ತಿತ್ವ ವಿಕಸನ ವಿಷಯದ ಕುರಿತು ಮಾತನಾಡಿದರು.
ಸಾಧನೆಯ ಮಾರ್ಗಗಳು, ವ್ಯಕ್ತಿತ್ವ ವಿಕಸನಕ್ಕೆ ಬೇಕಾದ ಅಂಶಗಳು ಹಾಗೂ ಸ್ವಾಮಿ ವಿವೇಕಾನಂದರ ಸಂದೇಶಗಳನ್ನು ಸ್ವಾಮೀಜಿ ವಿದ್ಯಾರ್ಥಿಗಳಿಗೆ ವಿವರಿಸಿದರು.
ಪ್ರಾಚಾರ್ಯ ಡಾ.ಎಚ್.ಎಸ್. ಓಂಕಾರಪ್ಪ ಮಾತನಾಡಿ, ಶಿಕ್ಷಣದೊಂದಿಗೆ ಇಂತಹ ಕಾರ್ಯಕ್ರಮಗಳು ಭವಿಷ್ಯದ ಬುನಾದಿಗೆ ಅಡಿಪಾಯ ಹಾಕುವಲ್ಲಿ ಪ್ರಾಮುಖ್ಯತೆ ವಹಿಸುತ್ತವೆ ಎಂದು ತಿಳಿಸಿದರು. ಬೋಧಕ ಮತ್ತು ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿಗಳು ಭಾಗವಹಿಸಿದ್ದರು.