ಹೊಸ ವಿದ್ಯಾರ್ಥಿಗಳಿಗೆ ‘ಹೊಸ ಹೆಜ್ಜೆ’

dvg-hosa-hejje-08.jpg
Published on

ದಾವಣಗೆರೆ : ನಗರದ ಜೈನ್ ಇಂಜಿನಿಯರಿಂಗ್ ಕಾಲೇಜಿನಲ್ಲಿ 2023-24ರ ಮೊದಲ ವರ್ಷದ ಬಿ.ಇ ವಿದ್ಯಾರ್ಥಿಗಳಿಗೆ ಉದ್ಘಾಟನಾ ಸಮಾರಂಭ ‘ಹೊಸ ಹೆಜ್ಜೆ’ಯನ್ನು ಗುರುವಾರ ಹಮ್ಮಿಕೊಳ್ಳಲಾಗಿತ್ತು.
 ದಾವಣಗೆರೆ ವಿಶ್ವವಿದ್ಯಾಲಯದ ರಸಾಯನ ಶಾಸ್ತ್ರ ಪ್ರಾಧ್ಯಾಪಕ ಡಾ. ಎಚ್.ಪಿ. ನಾಗಸ್ವರೂಪ್ ವಿದ್ಯಾರ್ಥಿಗಳಿಗೆ ಹಾಗೂ ಪಾಲಕರಿಗೆ ಸ್ಫೂರ್ತಿದಾಯಕ ಮಾತುಗಳನ್ನಾಡಿದರು.
 ಜೈನ್ ಗ್ರೂಪ್ ಆಫ್ ಇನ್‌ಸ್ಟಿಟ್ಯೂಷನ್ಸ್‌ನ ಸಲಹೆಗಾರ ಡಾ. ಮಂಜಪ್ಪ ಸಾರಥಿ ಮಾತನಾಡಿ, ವಿದ್ಯಾರ್ಥಿಗಳು ಹೇಗೆ ಕೌಶಲವನ್ನು ಬೆಳೆಸಿಕೊಳ್ಳಬೇಕು ಎಂಬುದನ್ನು ತಿಳಿಸಿದರು. ಪ್ರಾಚಾರ್ಯ ಡಾ. ಗಣೇಶ್.ಡಿ.ಬಿ. ಮಾತನಾಡಿ ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸುವಲ್ಲಿ ಶಿಕ್ಷಕರ ಮತ್ತು ಪಾಲಕರ ಪಾತ್ರದ ಬಗ್ಗೆ ಹೇಳಿದರು. ಸಂಯೋಜಕ ಪ್ರೊ. ನಟರಾಜ.ಜಿ, ವಿವಿಧ ವಿಭಾಗದ ಮುಖ್ಯಸ್ಥರು ಹಾಗೂ ಪ್ರಾಧ್ಯಾಪಕರು ಇದ್ದರು.
 ...

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net