

ದಾವಣಗೆರೆ : ಕನ್ನಡದ ನಂ. 1 ದಿನಪತ್ರಿಕೆ ವಿಜಯವಾಣಿ, ದಾವಣಗೆರೆ ವಿಶ್ವವಿದ್ಯಾಲಯ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ವಿಭಾಗ ಹಾಗೂ ದಾವಣಗೆರೆ ಜಿಲ್ಲಾ ಚಿತ್ರಕಲಾ ಶಿಕ್ಷಕರ ಸಂಘದ ಸಹಯೋಗದಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ವಿದ್ಯಾರ್ಥಿಗಳಿಗೆ ಸ್ಥಳದಲ್ಲೇ ಚಿತ್ರ ಬಿಡಿಸುವ ಸ್ಪರ್ಧೆಯನ್ನು ಜೂ. 19 ರಂದು ನಗರದ ಜಯದೇವ ವೃತ್ತದಲ್ಲಿರುವ ಶಿವಯೋಗಾಶ್ರಮದ ಜಗದ್ಗುರು ಶ್ರೀ ಜಯದೇವ ಸಾಂಸ್ಕೃತಿಕ ಭವನದಲ್ಲಿ ಆಯೋಜಿಸಲಾಗಿದೆ. ವಿದ್ಯಾರ್ಥಿಗಳಲ್ಲಿ ಪರಿಸರ ಪ್ರಜ್ಞೆ ಮತ್ತು ಕಾಳಜಿ ಬೆಳೆಸುವ ಉದ್ದೇಶದಿಂದ ಈ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿದೆ. ಪ್ರೌಢಶಾಲೆಯಿಂದ ಪದವಿ ವರೆಗಿನ ಜಿಲ್ಲೆಯ ವಿದ್ಯಾರ್ಥಿಗಳು ಭಾಗವಹಿಸಬಹುದು.