ಕಾಂಗ್ರೆಸ್ ಸಂಸ್ಥಾಪನಾ ದಿನಾಚರಣೆ

dvg-congres-28.jpg
Published on

ದಾವಣಗೆರೆ : ಜಿಲ್ಲಾ ಕಾಂಗ್ರೆಸ್ ವತಿಯಿಂದ ಪಕ್ಷದ ಸಂಸ್ಥಾಪನಾ ದಿನವನ್ನು ನಗರದ ಕಾಂಗ್ರೆಸ್ ಭವನದಲ್ಲಿ ಗುರುವಾರ ಆಚರಿಸಲಾಯಿತು.
 ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್.ಬಿ. ಮಂಜಪ್ಪ ಧ್ವಜಾರೋಹಣ ನೆರವೇರಿಸಿ ಮಾತನಾಡಿ, ಪ್ರಜಾಪ್ರಭುತ್ವದ ಆಶಯವನ್ನು ಎತ್ತಿ ಹಿಡಿಯುವ ಕೆಲಸವನ್ನು ಕಾಂಗ್ರೆಸ್ ಪಕ್ಷ ಮಾಡಿದೆ. ಈ ಸಂಭ್ರಮವನ್ನು ಕಾಂಗ್ರೆಸ್ ಪಕ್ಷ ಮಾತ್ರವಲ್ಲ, ದೇಶದ ಜನರೇ ಆಚರಿಸಬೇಕು ಎಂದರು.
 ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ. ಶೆಟ್ಟಿ, ಎಸ್. ಮಲ್ಲಿಕಾರ್ಜುನ್, ಮಾಜಿ ಸಚಿವ ಶಿವಮೂರ್ತಿ ನಾಯ್ಕ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಅಯೂಬ್ ಪೈಲ್ವಾನ್, ಕೆ.ಜಿ. ಶಿವಕುಮಾರ್, ಡೋಲಿ ಚಂದ್ರು ಇದ್ದರು.
 

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net