ಮತಕ್ಕಾಗಿ ಮಾತ್ರ ರಾಜ್ಯಕ್ಕೆ ಬರುವ ಮೋದಿ

db.jpg
Published on

ದಾವಣಗೆರೆ: ದೇಶದಲ್ಲಿ ಕಳೆದ 10 ವರ್ಷಗಳ ಆಡಳಿತದಲ್ಲಿ ರಾಜ್ಯದ ಬಗ್ಗೆ ಮಲತಾಯಿ ಧೋರಣೆ ತೋರಿದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮತಕ್ಕಾಗಿ ಮಾತ್ರ ರಾಜ್ಯಕ್ಕೆ ಬರಲಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಡಿ. ಬಸವರಾಜ್ ಟೀಕಿಸಿದರು.
 ವರ್ಷಕ್ಕೆ ಸುಮಾರು 4.50 ಲಕ್ಷ ಕೋಟಿ ರೂ. ತೆರಿಗೆ ಹಣ ಪಾವತಿಸುತ್ತಿದ್ದರೂ ರಾಜ್ಯಕ್ಕೆ ಬರಬೇಕಾದ ಅನುದಾನ ನೀಡುತ್ತಿಲ್ಲ ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ದೂರಿದರು.
 ರಾಜ್ಯದಲ್ಲಿ ಸುಮಾರು 35 ಲಕ್ಷ ಹೆಕ್ಟೇರ್ ಪ್ರದೇಶ ಬರ ಹಾನಿಗೊಳಗಾಗಿದ್ದು, ಬಿಡಿಗಾಸು ಪರಿಹಾರ ನೀಡಿಲ್ಲ. ತೀವ್ರ ಬರಗಾಲಕ್ಕೆ  ಸ್ಪಂದಿಸಿಲ್ಲ. ವಿಧಾನಸಭಾ ಚುನಾವಣೆಯಂತೆ ಲೋಕಸಭಾ ಚುನಾವಣೆಯಲ್ಲೂ ರಾಜ್ಯದ ಮತದಾರರು ಬಿಜೆಪಿಗೆ ಪಾಠ ಕಲಿಸಲಿದ್ದಾರೆ ಎಂದರು.
 ಇನ್ನು ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡರು ತಮ್ಮ ಮಕ್ಕಳು ಮತ್ತು ಮೊಮ್ಮಕ್ಕಳ ಅಧಿಕಾರಕ್ಕಾಗಿ ಮೋದಿ ಬಳಿ ಶರಣಾಗಿದ್ದಾರೆ ಎಂದ ಅವರು, ಕ್ಷೇತ್ರದಲ್ಲಿ 1 ಲಕ್ಷಕ್ಕೂ ಅಧಿಕ ಮತಗಳಿಂದ ಕಾಂಗ್ರೆಸ್ ಅಭ್ಯರ್ಥಿ ಗೆಲುವು ಸಾಧಿಸಲಿದ್ದಾರೆ ಎಂದರು.
 ಕಾಂಗ್ರೆಸ್ ಮುಖಂಡರಾದ ಬಿ.ಎಚ್. ಉದಯಕುಮಾರ್, ಎಂ.ಕೆ. ಲಿಯಾಕತ್ ಅಲಿ, ಡಿ. ಶಿವಕುಮಾರ್, ಬಿ.ಎಸ್. ಸುರೇಶ್, ಮುಬಾರಕ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net