ಸಾಧನೆಗಳ ಬದಲು ಸುಳ್ಳಿನ ಕಂತೆ ಬಿಚ್ಚುವ ಮೋದಿ

dvg-siddaramayya-04_20240505231410001.jpg
Published on

ದಾವಣಗೆರೆ : ಹತ್ತು ವರ್ಷ ಪ್ರಧಾನಿಯಾಗಿ ನರೇಂದ್ರ ಮೋದಿ ಮಾಡಿದ್ದೇನು ಎನ್ನುವುದನ್ನು ದೇಶದ ಜನರಿಗೆ ತಿಳಿಸಿ ಮತ ಕೇಳುತ್ತಿಲ್ಲ. ಬದಲಿಗೆ ಸುಳ್ಳುಗಳನ್ನು ಮತ್ತೆ ಜನರ ಮುಂದಿಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
 ನಗರದ ಹೈಸ್ಕೂಲ್ ಮೈದಾನದಲ್ಲಿ ಶನಿವಾರ ನಡೆದ ‘ಪ್ರಜಾಧ್ವನಿ-2’ ಸಮಾವೇಶದಲ್ಲಿ ಮಾತನಾಡಿದರು.
 ವಿದೇಶದಿಂದ ಕಪ್ಪು ಹಣ ತಂದು ಪ್ರತಿಯೊಬ್ಬ ಭಾರತೀಯರ ಖಾತೆಗೆ 15 ಲಕ್ಷ ರೂ. ಹಾಕುವುದಾಗಿ ನಂಬಿಸಿ, 15 ರೂ. ಕೂಡಾ ನೀಡಿಲ್ಲ. ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿಸುವುದಾಗಿ ಹೇಳಿ ನಂಬಿಕೆ ದ್ರೋಹ ಮಾಡಿದರು. ಅವರೇ ಹೇಳಿದಂತೆ ರೈತರ ಆದಾಯ ದುಪ್ಪಟ್ಟು ಮಾಡಲಿಲ್ಲ ಎಂದರು.
 ಡೀಸೆಲ್, ಪೆಟ್ರೋಲ್, ಅಡುಗೆ ಅನಿಲ, ರಸಗೊಬ್ಬರ, ಬೇಳೆ, ಕಾಳು, ಅಡುಗೆ ಎಣ್ಣೆ ಸೇರಿ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿದೆ. ನಿರಂತರವಾಗಿ ಜನರಿಗೆ ದ್ರೋಹ ಬಗೆಯುತ್ತಲೇ ಇದ್ದಾರೆ ಎಂದು ದೂರಿದರು.
 ನಾವು 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದು ನುಡಿದಂತೆ ನಡೆದಿದ್ದೇವೆ. ಇದರಿಂದ ಜನರ ಆರ್ಥಿಕ ಸ್ಥಿತಿ ಸುಧಾರಣೆಯಾಗಿದೆ. ಇದೇ ಮಾದರಿಯಲ್ಲಿ ರಾಷ್ಟ್ರಮಟ್ಟದಲ್ಲೂ ಗ್ಯಾರಂಟಿ ಯೋಜನೆಗಳನ್ನು ನಮ್ಮ ಪಕ್ಷ ಘೋಷಣೆ ಮಾಡಿದೆ ಎಂದು ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net