ಜನಾಂದೋಲನ ಕಾರ್ಯಕ್ರಮಕ್ಕೆ ಜಿಲ್ಲೆಯ ಮುಖಂಡರು

IMG-20240808-WA0065.jpg
Published on

ದಾವಣಗೆರೆ :  ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಬಿಜೆಪಿ, ಜೆಡಿಎಸ್ ಹಮ್ಮಿಕೊಂಡಿರುವ ಪಾದಯಾತ್ರೆ ವಿರೋಧಿಸಿ ಕಾಂಗ್ರೆಸ್ ಪಕ್ಷವು ಶುಕ್ರವಾರ ಮೈಸೂರಿನಲ್ಲಿ ಹಮ್ಮಿಕೊಂಡಿರುವ ಜನಾಂದೋಲನದಲ್ಲಿ ಜಿಲ್ಲೆಯ 500ಕ್ಕೂ ಹೆಚ್ಚು ಮುಖಂಡರು, ಪದಾಧಿಕಾರಿಗಳು ಭಾಗವಹಿಸಲಿದ್ದಾರೆ ಎಂದು ಪಕ್ಷದ ರಾಜ್ಯ ಮಹಿಳಾ ಘಟಕದ ಕಾರ್ಯದರ್ಶಿ ಶುಭಮಂಗಳಾ ಹೇಳಿದರು.  ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸಿದ್ದರಾಮಯ್ಯ ಅವರ 40 ವರ್ಷಗಳ ರಾಜಕೀಯ ಬದುಕಿನಲ್ಲಿ ಯಾವುದೇ ಕಪ್ಪುಚುಕ್ಕೆ ಇಲ್ಲ. ಹಿಂದುಳಿದವರು ಒಳಗೊಂಡಂತೆ ಸಮಾಜದ ಕಟ್ಟಕಡೆಯ ವ್ಯಕ್ತಿಯನ್ನೂ ಗುರುತಿಸಿ ಅನೇಕ ಸೌಲಭ್ಯ, ಸ್ಥಾನಮಾನ ನೀಡಿದ್ದಾರೆ ಎಂದು ತಿಳಿಸಿದರು.  ಸಿದ್ದರಾಮಯ್ಯ ತಪ್ಪು ಮಾಡಿಲ್ಲ. ಅವರನ್ನು ಅಧಿಕಾರದಿಂದ ಕೆಳಗೆ ಇಳಿಸುವ ಪ್ರಯತ್ನ ಮಾಡಿದಲ್ಲಿ ಮುಂದಿನ ದಿನಗಳಲ್ಲಿ ತೀವ್ರ ಸ್ವರೂಪದ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.  ಮಹಾನಗರ ಪಾಲಿಕೆ ಸ್ಥಾಯಿ ಸಮಿತಿ ಅಧ್ಯಕ್ಷೆ ಮೀನಾಕ್ಷಿ ಜಗದೀಶ್, ಸದಸ್ಯರಾದ ಸವಿತಾ ಹುಲ್ಮನೆ ಗಣೇಶ್, ಆಶಾ ಉಮೇಶ್, ಸುಧಾ ಇಟ್ಟಿಗುಡಿ ಮಂಜುನಾಥ್, ಕೆ. ಕಾವ್ಯಾ, ಮಂಜುಳಮ್ಮ, ಮಂಗಳಮ್ಮ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net