ಸಂವಿಧಾನ ಬದಲಿಸಲು ತೆರೆಮರೆಯ ಹುನ್ನಾರ

dvg-D.-Basavaraj.jpg
Published on

ದಾವಣಗೆರೆ : ಕೇಂದ್ರ ಹಾಗೂ ಕೆಲ ರಾಜ್ಯಗಳಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಆಡಳಿತಕ್ಕೆ ಬಂದ ದಿನದಿಂದಲೂ ಡಾ. ಅಂಬೇಡ್ಕರ್ ರಚಿಸಿದ ಸಂವಿಧಾನ ಬದಲಿಸಲು ತೆರೆ ಮರೆಯಲ್ಲಿ ಹುನ್ನಾರ ನಡೆಸುತ್ತಿದೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಡಿ. ಬಸವರಾಜ್ ಆರೋಪಿಸಿದರು.  ನಗರದ ಎಂಸಿಸಿ ‘ಎ’ ಬ್ಲಾಕ್‌ನಲ್ಲಿ ಶುಕ್ರವಾರ ಏರ್ಪಡಿಸಿದ್ದ ಅಂಬೇಡ್ಕರ್ ಅವರ ಮಹಾ ಪರಿನಿರ್ವಾಣ ದಿನಾಚರಣೆಯಲ್ಲಿ ಮಾತನಾಡಿದರು.  ಈ ಹಿಂದೆ ನರೇಂದ್ರ ಮೋದಿ ಸರ್ಕಾರದಲ್ಲಿ ಸಚಿವರಾಗಿದ್ದ ಅನಂತ ಕುಮಾರ್ ಹೆಗಡೆ ಬಹಿರಂಗವಾಗಿಯೇ ಮಾತನಾಡಿ, ಸಂವಿಧಾನ ಬದಲಿಸಲೆಂದೇ ನಾವು ಅಧಿಕಾರಕ್ಕೆ ಬಂದಿರುವುದು ಎಂದು ಹೇಳಿಕೆ ನೀಡಿದ್ದರು.  ಆದರೂ ಪ್ರಧಾನಿ ಮೋದಿ ಯಾವುದೇ ಕ್ರಮ ತೆಗೆದುಕೊಳ್ಳಲಿಲ್ಲ. ಇದರ ಅರ್ಥ ಬಿಜೆಪಿ ಅಧಿಕಾರದಲ್ಲಿದ್ದರೆ ಸಂವಿಧಾನಕ್ಕೆ ಆಪಾಯ ತಪ್ಪಿದ್ದಲ್ಲ, ಒಂದೊಮ್ಮೆ ಬಿಜೆಪಿ ಸಂವಿಧಾನ ಬದಲಿಸಿದರೆ ದೇಶದಲ್ಲಿ ರಕ್ತಕ್ರಾಂತಿ ಆಗಲಿದೆ ಎಂದು ಎಚ್ಚರಿಸಿದರು.  ಡಾ. ಅಂಬೇಡ್ಕರ್ ಅವರು ಮಹಾ ದಾರ್ಶನಿಕರು ಹಾಗೂ ಮಾನವತೆಯ ರಾಯಭಾರಿಯಾಗಿದ್ದರು. ಶೋಷಿತರ ಬದುಕನ್ನು ಕಟ್ಟಿಕೊಡಲು ತಮ್ಮ ಜೀವನವನ್ನೇ ಮುಡಿಪಾಗಿಟ್ಟರು ಎಂದು ತಿಳಿಸಿದರು.  ಜಿಲ್ಲಾ ಕಾಂಗ್ರೆಸ್ ಮುಖಂಡರಾದ ಬಿ.ಎನ್. ವಿನಾಯಕ, ಬಿ.ಎಚ್. ಉದಯ ಕುಮಾರ, ನಿಟುವಳ್ಳಿ ಪ್ರವೀಣ್ ಕುಮಾರ್, ವಿನಾಯಕ, ನವೀನ್ ಕುಮಾರ್, ಶಶಿ ಕುಮಾರ್, ಡಿ. ಶಿವಕುಮಾರ್, ಬಿ.ಎಸ್. ಸುರೇಶ್, ಸಿ.ರಮೇಶ್, ಡಿ.ಎಸ್. ಹರೀಶ್, ಭೀಮೇಶ್, ಅಲ್ಲಾವಲ್ಲಿ ಸಮೀರ್ ಖಾನ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net