

ದಾವಣಗೆರೆ : ಗೃಹ ಸಚಿವ ಡಾ.ಜಿ. ಪರಮೇಶ್ವರ್ ಅವರ ಶಿಕ್ಷಣ ಸಂಸ್ಥೆಗಳ ಮೇಲೆ ನಡೆದಿರುವ ಜಾರಿ ನಿರ್ದೇಶನಾಲಯದ ದಾಳಿಯನ್ನು ಕೆಪಿಸಿಸಿ ವಕ್ತಾರ ಡಿ. ಬಸವರಾಜ್ ಖಂಡಿಸಿದ್ದಾರೆ. ಕೇಂದ್ರದ ಬಿಜೆಪಿ ಸರ್ಕಾರದ ರಾಜಕೀಯ ಅಜೆಂಡಾಗಳನ್ನು ಜಾರಿಗೆ ತರಲು, ಕೃಪಾಪೋಷಿತ ನಾಟಕ ಮಂಡಳಿಯಂತೆ ಇಡಿ ಕಾರ್ಯ ನಿರ್ವಹಿಸುತ್ತಿದೆ. ರಾಜಕೀಯವಾಗಿ ತನ್ನ ವಿರೋಧಿಗಳನ್ನು ಹತ್ತಿಕ್ಕಲು ಬಿಜೆಪಿ ನಾಯಕರು ಇಡಿ, ಐಟಿ, ಸಿಬಿಐ ಮುಂತಾದ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಹಿರಿಯ ದಲಿತ ನಾಯಕರೂ ಆಗಿರುವ ಪರಮೇಶ್ವರ್ ಅವರ ಸಾಮಾಜಿಕ ಮತ್ತು ಶೈಕ್ಷಣಿಕ ಉನ್ನತಿಯನ್ನು ಸಹಿಸದೇ ಬಿಜೆಪಿ ನಾಯಕರು ಅಸೂಯೆಯಿಂದ ದ್ವೇಷದ ಕ್ರಮ ಕೈಗೊಂಡಿದ್ದಾರೆ ಎಂದು ದೂರಿದ್ದಾರೆ.